ಕರಾವಳಿ

ಫೆ.19-20ರಂದು ಉಡುಪಿಯಲ್ಲಿ ಮಿಂಚಿನ ಸಂಚಾರ ಮಾಡುವ ಅಮಿತ್ ಷಾ!

Pinterest LinkedIn Tumblr

ಉಡುಪಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಮುಂದಿನ ವಾರ ಎರಡು ದಿನಗಳ ಕಾಲ ಉಡುಪಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆಬ್ರವರಿ 19 ಹಾಗೂ 20 ರಂದು ಪ್ರವಾಸಗೊಳ್ಳಲಿರುವ ಷಾ..ಕರಾವಳಿ ತೀರದ ಮೀನುಗಾರರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಉತ್ತರ ಕನ್ನಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ಮೂರು ಜಿಲ್ಲೆಯ ಮೀನುಗಾರರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು,ಅಮಿತ್ ಷಾ ಈ ಸಮ್ಮೇಳನದ ಉದ್ಘಾಟನೆಯನ್ನು ಮಾಡಲಿದ್ದಾರೆ.
ಅಷ್ಟೇ ಅಲ್ಲದೇ ಮುಂದೆ ಬರಲಿರುವ ಚುನಾವಣೆ ದೃಷ್ಟಿಯಿಂದ ಸಾಮಾಜಿಕ ಜಾಲತಾಣ ಪ್ರಮುಖರ ಸಮಾವೇಶ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ 6 ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯನ್ನ ಕೂಡ ಅಮಿತ್ ಷಾ ನೇತೃತ್ವದಲ್ಲಿ ನಡೆಯಲಿದೆ.

ಈ ಸಂಧರ್ಭದಲ್ಲಿ ರಾಜ್ಯಧ್ಯಕ್ಷ ಬಿ ಎಸ್ ಯಡಿಯೂರಪ್ಪ,ಶೋಭಾ ಕರಾಂದ್ಲಾಜೆ ಹಾಗೂ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯದ ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.

Comments are closed.