ಉಡುಪಿ: ಬೈಕ್ ಹಾಗೂ ಬಸ್ಸಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯ ಮಲ್ಪೆ ಬೀಚ್ ಬಳಿಯ ವಡಂಬಾಂಡೇಶ್ವರ ಬಳಿ ನಡೆದಿದೆ.
ಹೆಬ್ರಿ ಸೋಮೇಶ್ವರದ ಮಂಜುನಾಥ್ ನಾಯ್ಕ್ (25) ಮೃತಪಟ್ಟ ವ್ಯಕ್ತಿ.
ಮಂಜುನಾಥ್ ಅವರು ಹೂಡೆಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬಸ್ ಹಾಗೂ ಇವರ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ರಸ್ತೆಗೆ ಬಿದ್ದ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.