ಕರಾವಳಿ

ಶೂಟೌಟ್ ಪ್ರಕರಣ : ಭೂಗತ ಪಾತಕಿ ಕಲಿ ಯೋಗೀಶನ ಸಹಚರನ ಬಂಧನ

Pinterest LinkedIn Tumblr

ಮಂಗಳೂರು, ಫೆಬ್ರವರಿ. 16: ಮಂಗಳೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭೂಗತ ಪಾತಕಿ ಕಲಿ ಯೋಗೀಶನ ಸಹಚರ ಎನ್ನಲಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಮುಲ್ಕಿ, ಚಿತ್ರಾಪು ಗ್ರಾಮ ನಿವಾಸಿ ಭೂಗತ ಪಾತಕಿ ಕಲಿ ಯೋಗೀಶನ ಸಹಚರ ತೇಜಪಾಲ್ (33) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದಲ್ಲಿ ಇತ್ತೀಚೆಗೆ ಭೂಗತ ಪಾತಕಿ ಕಲಿ ಯೋಗೀಶ ತನ್ನ ಸಹಚರರಿಂದ ನಡೆಸಿದ ಸರಣಿ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ನಿರೀಕ್ಷಕರಾದ ಶಾಂತರಾಮ್ ಅವರ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕಲಿ ಯೋಗೀಶ ಸಹಚರ ಮನೋಜ್ ಕುಮಾರ್ ಮತ್ತು ಚಂದ್ರ ಶೇಖರ್ ಎಂಬವರನ್ನು ವಶಕ್ಕೆ ಪಡೆದುಕೊಂಡು 2 ಪಿಸ್ತೂಲ್ ಹಾಗು 7 ಸಜೀವ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

Comments are closed.