ಕರಾವಳಿ

ಬಾರಕೂರು ಶ್ರೀ ಏಕನಾಥೇಶ್ವರೀ ದೇವಸ್ಥಾನದಲ್ಲಿ ಪೇಜಾವರ ಶ್ರೀ ಉಪಸ್ಥಿತಿಯಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Pinterest LinkedIn Tumblr

ಕುಂದಾಪುರ: ಬಾರಕೂರಿನಲ್ಲಿ ದೇವಾಡಿಗ ಸಮಾಜದಿಂದ ನಿರ್ಮಾಣವಾದ ಶ್ರೀ ಏಕನಾಥೇಶ್ವರೀ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಉಡುಪಿಯ ಶ್ರೀ ಅಧೋಕ್ಷಜ ಪೇಜಾವರ ಮಠದ ಶ್ರೀ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಈ ಸಂದರ್ಭ ಮಾತನಾಡಿದ ಅವರು, ದೇವರನ್ನು ಆಡಿಸುವ ದೇವಾಡಿಗ ಸಮಾಜದವರಿಂದ ಇಲ್ಲಿ ನಿರ್ಮಾಣಗೊಂಡ ದೇವಸ್ಥಾನದ ಮೂಲಕ ಲೋಕಕಲ್ಯಾಣ ಕಾರ್ಯವಾಗಲಿ. ಇಡೀ ಹಿಂದೂ ಸಮಾಜ ಒಗ್ಗೂಡಲು ದೇವಾಲಯಗಳ ಮೂಲಕ ಸಾಧ್ಯವಿದೆ. ಎಲ್ಲರಿಗೂ ಒಳಿತಾಗಲಿ ಎಂದು ಆಶೀರ್ವಚನ ನೀಡಿದರು.

ಬಳಿಕ ಧಾರ್ಮಿಕ ಕಾರ್ಯಕ್ರಮಗಳಾದ ಪುಣ್ಯಾಹವಾಚನ, ಗರ್ಭಗೃಹ ಪ್ರವೇಶ, ನಿತ್ಯ ಪೂಜಾರಂಭ, ದ್ರವ್ಯ ಕಲಶಾಭಿಷೇಕ, ಮಹಾಕುಂಭಾಭಿಷೇಕ ಪೂಜೆ, ನೀರಾಜನ ಪ್ರಾರ್ಥನೆ, ತೀರ್ಥಪ್ರಸಾದ ವಿತರಣೆ, ಮಂತ್ರಾಕ್ಷತೆ, ಋತ್ವಿಕ ಸಂಭಾವನೆ, ಆಚಾರ್ಯ ಸಂಭಾವನೆ, ಆಶೀರ್ವಾದ, ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಶ್ರೀ ಏಕನಾಥೇಶ್ವರೀ ದೇವಸ್ಥಾನ ಟ್ರಸ್ಟ್ (ರಿ.) ಬಾರ್ಕೂರಿನ ಅಧ್ಯಕ್ಷ ಮತ್ತು ಆಡಳಿತ ವಿಶ್ವಸ್ಥರಾದ ಬಿ. ಅಣ್ಣಯ್ಯ ಶೇರಿಗಾರ್, ಪ್ರಧಾನ ಕಾರ್ಯದರ್ಶಿ ಮತ್ತು ವಿಶ್ವಸ್ಥ ನರಸಿಂಹ ಬಿ. ದೇವಾಡಿಗ ಉಡುಪಿ, ಕೋಶಾಧಿಕಾರಿ ಹಾಗೂ ವಿಶ್ವಸ್ಥ ಬಿ. ಜನಾರ್ಧನ ದೇವಾಡಿಗ ಬಾರ್ಕೂರು, ದೇವಸ್ಥಾನ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಹಾಗೂ ವಿಶ್ವಸ್ಥರಾದ ಧರ್ಮಪಾಲ ಯು ದೇವಾಡಿಗ ಮುಂಬೈ, ಮುಖ್ಯ ಸಂಚಾಲಕರು ಮತ್ತು ವಿಶ್ವಸ್ಥರಾದ ಹಿರಿಯಡ್ಕ ಮೋಹನ್‌ದಾಸ್ ಮುಂಬೈ, ವಿಶ್ವಸ್ಥರಾದ ಸುರೇಶ ಡಿ. ಪಡುಕೋಣೆ ಮುಂಬೈ, ಹರೀಶ್ ಶೇರಿಗಾರ್ ದುಬೈ, ನಾರಾಯಣ ಎಂ. ದೇವಾಡಿಗ ದುಬೈ, ದಿನೇಶ್ ಸಿ. ದೇವಾಡಿಗ ದುಬೈ, ಜನಾರ್ಧನ ಎಸ್. ದೇವಾಡಿಗ ಮುಂಬೈ, ಎನ್. ರಘುರಾಮ ದೇವಾಡಿಗ ಶಿವಮೊಗ್ಗ, ಮುಂಬೈ ದೇವಾಡಿಗ ಸಂಘದ ಅಧ್ಯಕ್ಷ ರವಿ ಎಸ್. ದೇವಾಡಿಗ, ವಾಮನ್ ಮರೋಳಿ, ಗಣೇಶ್ ದೇವಾಡಿಗ ಬ್ರಹ್ಮಗಿರಿ ವಿವಿಧ ದೇವಾಡಿಗ ಸಂಘದ ಅಧ್ಯಕ್ಷರು ಇದ್ದರು.

ಚಿತ್ರ, ವರದಿ- ಯೋಗೀಶ್ ಕುಂಭಾಸಿ

Comments are closed.