ಕರಾವಳಿ

ಕೊಡಿಯಾಲ್ ಗುತ್ತಿನ ಫ್ಲಾಟ್‌ಗೆ ಸಿಸಿಬಿ ದಾಳಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರ ಸೆರೆ – ಓರ್ವ ಯುವತಿಯ ರಕ್ಷಣೆ

Pinterest LinkedIn Tumblr

ಮಂಗಳೂರು, ಫಬ್ರವರಿ.25: ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಕಾರ್ಯಾಚರಿಸುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ,ಓರ್ವ ಯುವತಿಯನ್ನು ರಕ್ಷಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಗರದ ಕೊಡಿಯಾಲ್ ಗುತ್ತಿನಲ್ಲಿರುವ ಫ್ಲಾಟ್ ಒಂದಕ್ಕೆ ಶನಿವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗೂ ಗಿರಾಕಿಗಳನ್ನು ಪೂರೈಸುತ್ತಿದ್ದ ಓರ್ವ ಏಜೆಂಟ್ (ಪಿಂಪ್) ನನ್ನು ಬಂದಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಅಡ್ಯಾರ್ ಪದವಿನ ರಿಯಾಝ್ ಅಹ್ಮದ್ (35) ಹಾಗೂ ಓರ್ವ ಮಹಿಳೆಯನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳಿಂದ 1,800 ರೂ., ಮೊಬೈಲ್ ಫೋನ್ ಹಾಗೂ ಆಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಸೊತ್ತಿನ ಒಟ್ಟು ಮೌಲ್ಯ 1,61,800 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಇದೇ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ರಕ್ಷಣೆ ಮಾಡಲಾಗಿದೆ.

ಬಂಧಿತ ಮಹಿಳೆ ಇಲ್ಲಿನ ಅಪಾರ್ಟ್‌ಮೆಂಟ್‌‌ನ ಫ್ಲಾಟ್ ಒಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುವ ಮೂಲಕ ಹಣ ಗಳಿಸುತ್ತಿದ್ದಳು.ರಿಯಾಝ್ ಅಹ್ಮದ್ ಇಲ್ಲಿಗೆ ಗಿರಾಕಿಗಳನ್ನು ಪೂರೈಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತ ಇಬ್ಬರು ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಸಿಸಿಬಿ ಇನ್ಸ್‌ಪೆಕ್ಟರ್ ಶಾಂತಾರಾಮ, ಎಸ್ ಐಗಳಾದ ಶ್ಯಾಮ್ ಸುಂದರ್ , ಕಬ್ಬಾಳರಾಜ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Comments are closed.