ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ -ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

Pinterest LinkedIn Tumblr

ಉಡುಪಿ: 2018ರ ದ್ವಿತೀಯ ಪಿಯುಸಿ ಪರೀಕ್ಷೆಗಳು 1-03-18ರಿಂದ 17-03-18ರವರೆಗೆ ನಡೆಯಲಿದ್ದು, ಪರೀಕ್ಷಾ ದಿನಗಳಂದು ಶಿಸ್ತು ಮತ್ತು ಶಾಂತಿ ಕಾಪಾಡಲು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಆದೇಶ ಹೊರಡಿಸಿದ್ದಾರೆ.

ಒಟ್ಟು 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 24 ಗಂಟೆಯೂ ನಿಷೇಧಾಜ್ಞೆ ಘೋಷಣೆಯಾಗಿರುತ್ತದೆ.

Comments are closed.