ಕುಂದಾಪುರ: ಬೈಂದೂರು ತಾಲೂಕಿನ ಬಿಜೂರು ಸಮೀಪದ ಗಂಟಿಹೊಳೆಯೆಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವೇಳೆ ಪೊಲೀಸರು ಮೂವರು ಆರೋಪಿಗಳನ್ನು ವಾಹನ ಸಮೇತ ಬಂಧಿಸಿದ್ದಾರೆ.
ಭಟ್ಕಳ ಮೂಲದ ಹನ್ಸನ್ ಇಸ್ಮಾಯಿಲ್, ಮೊಹಮ್ಮದ್ ಫೈರೋಸ್, ಸಕೀಬ್ ಬಂಧಿತ ಆರೋಪಿಗಳು.

ಆರೋಪಿಗಳು ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ಪಿಕ್ಅಪ್ ವಾಹನ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಅದರೊಳಗಿದ್ದ ೨ ಕರುಗಳು ಹಾಗೂ ಒಂದು ಎಮ್ಮೆಯನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರು ನೀಡಿದ ಖಚಿತ ಮಾಹಿತಿಯಂತೆ ಬೈಂದೂರು ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.