ಮಂಗಳೂರು, ಮಾರ್ಚ್.3: ನಾಗಾಲ್ಯಾಂಡ್ ಹಾಗೂ ತ್ರಿಪುರದಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಪಿವಿಎಸ್ ಕಟ್ಟಡ ಸಮೀಪದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ದಕ್ಷಿಣ ವಿಧಾನ ಮಂಡಲದ ಅಧ್ಯಕ್ಷ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ಸಂಭ್ರಮ ಪಟ್ಟರು.
ಮಾಜಿ ಶಾಸಕ ಎನ್.ಯೋಗೀಶ್ ಭಟ್, ಮಾಜಿ ಎಂಎಲ್ ಸಿ ಮೋನಪ್ಪ ಭಂಡಾರಿ, ಪ್ರಮುಖರಾದ ಸಂಜಯ ಪ್ರಭು, ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮಹಿಳಾ ಘಟಕದ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.