ಕುಂದಾಪುರ: ತಾಲೂಕಿನ ವಂಡ್ಸೆ ಕೆಳಪೇಟೆಯ ಅಂಗಡಿಯೊಂದರಲ್ಲಿ ಚಪ್ಪಲಿ ಖರೀದಿಗೆ ತೆರಳಿದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಅಂಗಡಿ ಮಾಲೀಕನ ವಿರುದ್ಧ ನೊಂದ ಮಹಿಳೆ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಸದ್ದಾಂ ಎನ್ನುವಾತನ ವಿರುದ್ಧ ಪ್ರಕರಣ ದಾಖಲಾಗಿದ್ದು ಆತ ಪರಾರಿಯಾಗಿದ್ದಾನೆ.
ಆರೋಪಿ ಬಂಧನಕ್ಕೆ ಒತ್ತಾಯಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಪೊಲೀಸರಿಗೆ ಗಡುವು ನೀಡಿದ್ದು ಇಂದು ಸಂಜೆ ವಂಡ್ಸೆಯಲ್ಲಿ ಪ್ರತಿಭಟನೆಗೆ ಸಿದ್ಧ ಮಾಡಿಕೊಳ್ಳಲಾಗಿದೆ.
ಕೊಲ್ಲೂರು ಪೊಲೀಸರು ಎರಡು ತಂಡರಚಿಸಿ ಆರೋಪಿ ಪತ್ತೆಗೆ ಮುಂದಾಗಿದ್ದಾರೆ.