ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕೆಯ ರಥೋತ್ಸವ ಶನಿವಾರ ಸಂಭ್ರಮದಿಂದ ಜರಗಿತು. ಬೆಳಗ್ಗೆ ಮುಹೂರ್ತ ಬಲಿ, ಕ್ಷಿಪ್ರಬಲಿ ಹಾಗೂ ರಥಬಲಿಯ ಅನಂತರ ರಥಾರೋಹಣದ ಸಂಕಲ್ಪದಲ್ಲಿ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಜನಾರ್ದನ ಜಿ.ಸಿ., ಉಪಕಾರ್ಯನಿರ್ವಹಣಾಧಿ ಕಾರಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರು ಹಾಗೂ ಅರ್ಚಕರು ಉಪಸ್ಥಿತರಿದ್ದರು.
ರಥೋತ್ಸವದಲ್ಲಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ದೇಗುಲದ ಸಮಿತಿಯ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ರಾಜೇಶ ಕಾರಂತ, ನರಸಿಂಹ ಹಳಗೇರಿ, ಅಭಿಲಾಷ್, ಅಂಬಿಕಾ ದೇವಾಡಿಗ, ಜಯಂತಿ ಪಡುಕೋಣೆ, ತಂತ್ರಿ ಮಂಜುನಾಥ ಅಡಿಗ, ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಬಾಬು ಶೆಟ್ಟಿ, ಕೊಲ್ಲೂರು ದೇಗುಲದ ಮಾಜಿ ಆಡಳಿತ ಧರ್ಮದರ್ಶಿ ಬಿ.ಎಂ. ಸುಕುಮಾರ ಶೆಟ್ಟಿ, ಅರ್ಚಕರಾದ ಡಾ| ಕೆ.ಎನ್. ನರಸಿಂಹ ಅಡಿಗ, ಶ್ರೀಧರ ಅಡಿಗ, ಕೆ. ಎನ್. ಗೋವಿಂದ ಅಡಿಗ, ರಾಮಚಂದ್ರ ಅಡಿಗ, ಸುಬ್ರಹಣ್ಯ ಅಡಿಗ ಮುಂತಾದವರು ಉಪಸ್ಥಿತರಿದ್ದರು.
ಸಹಸ್ರಾರು ಭಕ್ತರು ರಥೋತ್ಸವ ಸಂಭ್ರಮದಲ್ಲಿ ಪಾಲ್ಘೊಂಡರು.