ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2017ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ವಿಜಯವಾಣಿ’ ಪತ್ರಿಕೆಯ ವರದಿಗಾರ ಪ್ರಶಾಂತ್ ಎಸ್ ಸುವರ್ಣ ಸಿದ್ದಕಟ್ಟೆ ಆಯ್ಕೆಯಾಗಿದ್ದಾರೆ.
2017ರ ಜೂನ್ 03ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಕೇಳಿಸದೆ ನಮ್ಮ ಕರುಳಿನ ಕೂಗು?’’ ಅವರ ಈ ವರದಿಗೆ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿಯು ರೂ.10,001/ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟನೆಯಲ್ಲಿ ತಿಳಿಸಿದೆ.