ಉಡುಪಿ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿ ರಾಜಕಾರಣಕ್ಕೆ ಎಂಟ್ರಿ ಕೊಡೋದು ಪಕ್ಕಾ ಆಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸೋದು ನಿಶ್ಚಿತ ಎಂಬ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಚುನಾವಣೆಗಿನ್ನು ಎರಡು ತಿಂಗಳು ಬಾಕಿ ಇರುವಂತೆ ಕಣ ರಂಗೇರುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮೂರು ಮಂದಿ ಪ್ರಬಲ ಆಕಾಂಕ್ಷಿಗಳಿದ್ದು ಇದು ಕಾಂಗ್ರೆಸ್ ಪಾಲಿಗೆ ಬಿಸಿ ತುಪ್ಪದಂತಾಗಿದ್ದಾರೆ. ಈ ನಡುವೆ ವೀರಪ್ಪ ಮೊಯ್ಲಿ ಪುತ್ರ, ಕ್ಷೇತ್ರದ ಓರ್ವ ಪ್ರಬಲ ಟಿಕೆಟ್ ಆಕಾಂಕ್ಷಿ ಹರ್ಷ ಮೊಯ್ಲಿ ಸಾರ್ವಜನಿಕವಾಗಿ ಉಡುಪಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜನೆಯ ಹಿಂದುಳಿದವರ ಸಮಾವೇಶಕ್ಕೆ ಹರ್ಷ ಮೊಯ್ಲಿ ರಾಜಕಾರಣಿಯ ಗೆಟಪ್‍ನಲ್ಲಿ ಬಂದಿಳಿದಿದ್ದಾರೆ. ಹರ್ಷ ಮೊಯ್ಲಿ ಆಗಮನ, ನಾಯಕರ ಜೊತೆ ಮಾತುಕತೆಗಳನ್ನು ನೋಡಿದ್ರೆ ಟಿಕೆಟ್ ಮೊಯ್ಲಿ ಪುತ್ರನಿಗೆ ಪಕ್ಕಾ ಆದಂತಿದೆ. ಮೊಯ್ಲಿ ಪುತ್ರನಿಗೆ ಕಾರ್ಕಳದಲ್ಲಿ ಟಿಕೆಟ್ ಕೊಟ್ಟರೆ ಪಕ್ಷದೊಳಗೆ ಭಿನ್ನಮತ ಇನ್ನಷ್ಟು ಬಿಗುಡಾಯಿಸೋದು ಗ್ಯಾರೆಂತಿ.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ಈ ಬಾರಿ ಕೈ ಪಕ್ಷದ ಪ್ರಬಲ ಆಕಾಂಕ್ಷಿ. ಕಳೆದ ಎರಡು ವರ್ಷದಿಂದ ಉದಯ ಕುಮಾರ್ ಶೆಟ್ಟಿ ಕ್ಷೇತ್ರದಲ್ಲಿ ಎಲ್ಲಾ ತರದ ಸಿದ್ಧತೆ ನಡೆಸಿದ್ದಾರೆ. 25 ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಮತದಾರರ ಬೆಂಬಲ ಇದೆ, ಮಲಗಿದ್ದ ಕಾಂಗ್ರೆಸ್ಸನ್ನು ಬಡಿದೆಬ್ಬಿಸಿದ್ದೇನೆ ಎಂದು ಹೇಳಿರುವ ಉದಯ ಕುಮಾರ್ ಶೆಟ್ಟಿ, ಕೊನೆಯ ಹಂತದಲ್ಲಿ ಟಿಕೆಟ್ ಕೈತಪ್ಪಿದರೆ ಅಸಮಾಧಾನಗೊಳ್ಳೋದು ನಿಜ.
ಕಾರ್ಕಳಕ್ಕೆ ಒಬ್ಬ ಕಾಂಗ್ರೆಸ್ ನ ಎಂಎಲ್ಎ ಬೇಕು. ಈಗಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವಧಿಯಲ್ಲಿ ಏನೂ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕ ಇದ್ದರೆ ಅಲ್ಲಿ ಹೆಚ್ಚಿನ ಅಭಿವೃದ್ಧಿ ಆಗುತ್ತದೆ. ಕೆಪಿಸಿಸಿ, ಎಐಸಿಸಿ ಸೆಲೆಕ್ಟ್ ಮಾಡೋಡು. ನನಗೆ ಟಿಕೆಟ್ ಫೈನಲ್ ಆಗಿದೆ ಎಂಬೂದು ಸರಿಯಲ್ಲ. ಕಾರ್ಕಳದಲ್ಲಿ ಹಲವಾರು ನಾಯಕರಿದ್ದಾರೆ. ಎಲ್ಲರಿಗೂ ನನಗೆ ಟಿಕೆಟ್ ಸಿಕ್ಕರೆ ಕೆಲಸ ಮಾಡಬಹುದು ಎಂಬ ಆಕಾಂಕ್ಷೆಯಿದೆ. ಅದು ತಪ್ಪೂ ಅಲ್ಲ. ರಾಜಕೀಯದಲ್ಲಿ ಅಕಾಂಕ್ಷೆಗಳು ತಪ್ಪಲ್ಲ. ಕಾಂಗ್ರೆಸ್ ವಿನ್ ಆಗ್ಬೇಕು ಅನ್ನೋದು ಎಲ್ಲರ ಆಕಾಂಕ್ಷೆ. ಒಂದು ವೇಳೆ ಪಾರ್ಟಿ ಹೇಳಿದರೆ ನಾನು ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ ಹರ್ಷ ಮೊಯ್ಲಿ ಹೇಳಿದ್ದಾರೆ.