ಕರಾವಳಿ

ಬೌದ್ಧ ಧರ್ಮಕ್ಕೆ ದಲಿತರ ಮತಾಂತರ : ಭಂತೇಜಿಯವರಿಂದ 11 ಮಂದಿಗೆ ಬೌದ್ಧ ಧರ್ಮದ ದೀಕ್ಷೆ

Pinterest LinkedIn Tumblr

ಮಂಗಳೂರು, ಮಾರ್ಚ್ 16: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರಿನಲ್ಲಿ ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಬೌದ್ಧ ಮತಕ್ಕೆ ಮತಾಂತರಗೊಂಡ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರ ಗೃಹಪ್ರವೇಶ ಸಂದರ್ಭ ಈ ಘಟನೆ ನಡೆದಿದ್ದು, ದಲಿತ ಸಂಘರ್ಷ ಸಮಿತಿ ಮುಖಂಡ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾದ ಭಂತೇಜಿ, ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಸುಗತಪಾಲ ಭಂತೇಜಿಯವರು ಬೌದ್ಧ ಶಾಸನದ ಪ್ರಕಾರ ಬುದ್ಧ ಪೂಜೆ ನೆರವೇರಿಸಿ,11 ಮಂದಿಗೆ ಧಮ್ಮೋಪದೇಶ ನೀಡಿದ್ದಾರೆ ಎನ್ನಲಾಗಿದೆ.

ಸ್ಥಳೀಯ ನಿವಾಸಿಗಳಾದ ಪುಟ್ಟಣ್ಣ, ಸುಶೀಲ, ನಯನ್ ಕುಮಾರ್, ನಮಿತಾ, ಸತೀಶ ಕುಮಾರ್, ಪ್ರೇಮ, ಹರ್ಷ, ಸುಶೀಲಾ, ಮನೋಜ್ ಕುಮಾರ್, ವಿಶ್ವನಾಥ್ ಹಾಗೂ ಗಣೇಶ್ ಎಂಬವರು ಹಿಂದು ಧರ್ಮದಿಂದ ಬೌದ್ಧ ಮತಕ್ಕೆ ಮತಾಂತರಗೊಂಡಿದ್ದು ಇವರಿಗೆ ಬೌದ್ಧ ಧರ್ಮದ ದೀಕ್ಷೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಹಿಂದೂ ಧರ್ಮದಿಂದ ದಲಿತರು ಬೌದ್ಧರಾಗಿ ಪರಿವರ್ತನೆ ಹೊಂದಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪರ ವಿರೋಧದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Comments are closed.