ಕರಾವಳಿ

ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕರಾವಳಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

Pinterest LinkedIn Tumblr

ಮಂಗಳೂರು, ಮಾರ್ಚ್.20: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಕರಾವಳಿಗೆ ಆಗಮಿಸಿದ್ದಾರೆ. ಕರಾವಳಿಯ ಅವಳಿ ಜಿಲ್ಲೆಯಲ್ಲಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಳಗ್ಗೆ 11:30ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಸಚಿವ ರಮಾನಾಥ ರೈ, ಮನಪಾ ಮೇಯರ್ ಭಾಸ್ಕರ ಮೊಯ್ಲಿ, ಶಾಸಕ ಜೆ.ಆರ್.ಲೋಬೋ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಯು.ಬಿ.ವೆಂಕಟೇಶ್ ಮತ್ತಿತರರು ಸ್ವಾಗತಿಸಿದರು.

ಈ ಸಂದರ್ಭ ಬಿ.ಎ.ಮೊಯ್ದಿನ್ ಬಾವ, ಉಪ ಮೇಯರ್ ಮುಹಮ್ಮದ್ ಕೆ., ಎಐಸಿಸಿ ಸದಸ್ಯೆ ಕವಿತಾ ಸನಿಲ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತಿತರರು ಉಪಸ್ಥಿತರಿದ್ದರು.

ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ರಾಹುಲ್ ಗಾಂಧಿ ಅವರು ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಮಾನ ನಿಲ್ದಾಣದಿಂದ ನೇರವಾಗಿ ವಿಶೇಷ ಹೆಲಿಕಾಪ್ಟರ್ ಮೂಲಕ ಪಡುಬಿದ್ರೆ ಸಮೀಪದ ತೆಂಕ ಎರ್ಮಾಳ್ ಗೆ ತೆರಳಿದರು.

ರಾಹುಲ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ತೆರಳಿದರು. ಇನ್ನೊಂದು ಹೆಲಿಕಾಪ್ಟರ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಚಿವ ಡಿ.ಕೆ.ಶಿವಕುಮಾರ್ ತೆರಳಿದರು.

__ ವಾಭಾ

Comments are closed.