ಕರಾವಳಿ

ಸುರತ್ಕಲ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಗಾ : ತುಳುವಿನಲ್ಲಿ “ನಿಕ್ಲೆಗ್ ಎನ್ನ ನಮಸ್ಕಾರ” ಎಂದು ರಾಹುಲ್

Pinterest LinkedIn Tumblr

ಮಂಗಳೂರು,ಮಾರ್ಚ್.20: ಕರಾವಳಿ ಪ್ರವಾಸದಲ್ಲಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ದ.ಕ.ಜಿಲ್ಲೆಯ ಸುರತ್ಕಲ್‌ನಲ್ಲಿ ಹಮ್ಮಿಕೊಳ್ಳಲಾದ ‘ಜನಾಶೀರ್ವಾದ ಯಾತ್ರೆ’ಯಲ್ಲಿ ಪಾಲ್ಗೊಂಡರು.

ಇಂದು ಅಪರಾಹ್ನ ಸುರತ್ಕಲ್‌ಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು ಸುರತ್ಕಲ್‌ ಜಂಕ್ಸನ್ ನ ರಸ್ತೆ ಬದಿಯಲ್ಲಿ ಹಾಕಲಾದ ಭವ್ಯ ವೇದಿಕೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ತಮ್ಮ ಭಾಷಣದ ಆರಂಭದಲ್ಲಿ ತುಳುವಿನಲ್ಲಿ “ನಿಕ್ಲೆಗ್ ಎನ್ನ ನಮಸ್ಕಾರ” ಎಂದು ಹೇಳುವ ಮೂಲಕ ರಾಹುಲ್ ಗಾಂಧಿಯವರು ನೆರದವರಲ್ಲಿ ಪುಳಕ ಮೂಡಿಸಿದರು. ಮಾತ್ರವಲ್ಲದೇ ನೆರೆದ ಸಭಿಕರು ಇವರ ತುಳು ಸ್ವಾಗತಕ್ಕೆ ಕರತಾಂಡನದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ತಮ್ಮ ಭಾಷಣದಲ್ಲಿ ಶ್ರೀ ನಾರಾಯಣ ಗುರು ಹಾಗೂ ಬಸವಣ್ಣರಂತಹ ಮಹಾಪುರುಷರ ಅದರ್ಶದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ ಅವರು “ನುಡಿದಂತೆ ನಡೆ” ಎಂದು ಕನ್ನಡದಲ್ಲಿ ಹೇಳುವ ಮೂಲಕ ಮತ್ತೊಮ್ಮೆ ಕರಾವಳಿಯ ಜನತೆಯ ಮೆಚ್ಚುಗೆಗೆ ಪಾತ್ರರಾದರು. ಮಾತ್ರವಲ್ಲದೇ “ನುಡಿದಂತೆ ನಡೆ” ಎಂದರೆ ಏನು ಎಂಬುವುದರ ಬಗ್ಗೆ ಹಿಂದಿಯಲ್ಲಿ ವಿಶ್ಲೇಷಣೆ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕೆಪಿಸಿಸಿ ಉಸ್ತುವಾರಿ ವೇಣುಗೋಪಾಲ, ಸಂಸದರಾದ ಡಾ. ಎಂ.ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಸಚಿವ ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್, ಶಾಸಕರಾದ ಬಿ.ಎ.ಮೊಯ್ದಿನ್ ಬಾವ, ಅಭಯ ಚಂದ್ರ ಜೈನ್, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Comments are closed.