ಕರಾವಳಿ

ಹಾರ್ಡ್‌ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

Pinterest LinkedIn Tumblr

ಉಡುಪಿ: ಹಾರ್ಡ್‌ವೇರ್ ಅಂಗಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅಪಾರ ಪ್ರಮಾಣದ ಸೊತ್ತು ಸುಟ್ಟು ಕರಕಲಾದ ಘಟನೆ ಇಲ್ಲಿಗೆ ಸಮೀಪದ ಮಣಿಪಾಲದದಲ್ಲಿರುವ ನಾಲ್ಕು ಮಹಡಿಯ ಕಟ್ಟಡದಲ್ಲಿ ವರದಿಯಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕ್ಷಣಾರ್ಧಲ್ಲಿ ಅಗ್ನಿಯ ಜ್ವಾಲೆ ಹರಡಿಕೊಂಡಿದ್ದು, ಇಡೀ ಕಟ್ಟಡದ ತುಂಬ ದಟ್ಟ ಹೊಗೆ ಆವರಿಸಿಕೊಂಡಿದೆ. ಎರಡೂ ಕೋಣೆಗಳಲ್ಲಿದ್ದ ಅಪಾರ ಪ್ರಮಾಣದ ಪೈಂಟ್ ಡಬ್ಬಗಳು ಹಾಗೂ ಹಾರ್ಡ್‌ವೇರ್ ವಸ್ತುಗಳು ಸುಟ್ಟು ಕರಕಲಾಗಿವೆ. ಅಂದಾಜು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ.

Comments are closed.