ಕರಾವಳಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ರೊಸಾರಿಯೋ ಚರ್ಚ್,ಉಳ್ಳಾಲ ದರ್ಗಾಕ್ಕೆ ರಾಗಾ ಭೇಟಿ – ಟೆಂಪಲ್ ರನ್ ಹಿಂದಿನ ರಹಸ್ಯ ಏನು..

Pinterest LinkedIn Tumblr

ಮಂಗಳೂರು,ಮಾರ್ಚ್.21: ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಕರಾವಳಿಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಮಂಗಳೂರಿನ ರೊಸಾರಿಯೋ ಚರ್ಚ್ ಹಾಗೂ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದರು.

ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ರಾಹುಲ್ ಗಾಂಧಿ ಶ್ರೀ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದರು.

ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ರಾಜ್ಯಸಭಾ ಸದಸ್ಯ ಹರಿಪ್ರಸಾದ್, ಎಐಸಿಸಿ ಪ್ರ.ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಾಸಕರಾದ ಮೊಯ್ದಿನ್ ಬಾವಾ, ಐವನ್ ಡಿಸೋಜ, ಮೇಯರ್ ಬಾಸ್ಕರ್ ಮೊಯ್ಲಿ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರಿನ ರೊಸಾರಿಯೋ ಚರ್ಚ್‌ಗೆ ಭೇಟಿ :

ಮಂಗಳೂರು ಕರವಾಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನಗರದ ಪಾಂಡೇಶ್ವರದಲ್ಲಿರುವ ರೊಸಾರಿಯೋ (Rosario Cathedral) ಚರ್ಚ್ ಗೆ ಭೇಟಿ ನೀಡಿದರು. ಅವರನ್ನು ಮಂಗಳೂರು ಬಿಷಪ್ ಡಾ.ಅಲೋಶಿಯಸ್ ಪೌಲ್ ಡಿಸೋಜ ಬರಮಾಡಿಕೊಂಡರು.

ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಹಿತ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಉಳ್ಳಾಲ ದರ್ಗಾಕ್ಕೆ ಸೌಹಾರ್ದ ಭೇಟಿ :

ಮಂಗಳೂರು: ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಪ್ರಥಮ ಬಾರಿಗೆ ಅವಿಭಜಿತ ದ.ಕ.ಜಿಲ್ಲೆಗೆ ಮಂಗಳವಾರ ಆಗಮಿಸಿದ ರಾಹುಲ್ ಗಾಂಧಿ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾಕ್ಕೆ ಸೌಹಾರ್ದ ಭೇಟಿ ನೀಡಿದರು.ನಂತರ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಹಿತ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ರಾಹುಲ್ ಗಾಂಧಿಯವರ ಟೆಂಪಲ್ ರನ್ ಹಿಂದಿನ ರಹಸ್ಯ :

ಮಂಗಳೂರು: ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗದಲ್ಲಿ ಯಶಸ್ವೀ ಜನಾಶೀರ್ವಾದ ಯಾತ್ರೆ ನಡೆಸಿದ್ದ ಕಾಂಗ್ರೆಸ್ ಈಗ ಕರಾವಳಿಯತ್ತ ಗಮನ ಹರಿಸಿದೆ. ಕರಾವಳಿಯಲ್ಲಿ ಚುನಾವಣಾ ಪ್ರಚಾರದ ಭಾಗವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರದಿಂದ ಪ್ರವಾಸ ಕೈಗೊಂಡಿದ್ದಾರೆ.

20 ಮತ್ತು 21 ರಂದು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮೂರನೇ ಹಂತದ ಜನಾಶಿರ್ವಾದ ಯಾತ್ರೆಯನ್ನು ಅವರು ಆರಂಭಿಸಿದ್ದಾರೆ. ಆದರೆ ಗಮನಿಸಬೇಕಾದ ಅಂಶ ಎಂದರೆ ಕರಾವಳಿಯಲ್ಲಿ ಮೂರೂ ಧರ್ಮಗಳು ಪ್ರಬಲವಾಗಿರುವುದರಿಂದ ದೇಗುಲ, ಚರ್ಚ್ ಮತ್ತು ದರ್ಗಾಗಳಿಗೂ ರಾಹುಲ್ ಭೇಟಿ ನೀಡಲಿದ್ದಾರೆ. ಕರಾವಳಿಯಲ್ಲಿ ಮೂರು ಧರ್ಮದ ಮತದಾರರನ್ನು ಸೆಳೆಯಲು ಈ ಭೇಟಿ ನಿಗದಿ ಮಾಡಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

Comments are closed.