ಕರಾವಳಿ

ಪಣಂಬೂರು ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಓರ್ವ ಮೃತ್ಯು – ಆರು ಮಂದಿಗೆ ಗಾಯ

Pinterest LinkedIn Tumblr

ಮಂಗಳೂರು, ಮಾರ್ಚ್. 29 ಮಂಗಳೂರಿನ ಪಣಂಬೂರು ಎಂಸಿಎಫ್ ಬಳಿ ಬುಧವಾರ ತಡ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಆರು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಪಣಂಬೂರು ಎಂಸಿಎಫ್ ಬಳಿ ರಾತ್ರಿ ಸುಮಾರು 1:30 ಕ್ಕೆ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕ ಗದಗ ನಿವಾಸಿ ಹನುಮಂತಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರಿನಲ್ಲಿ ಸುಮಾರು 9 ಮಂದಿ ಇದ್ದರೆನ್ನಲಾಗಿದ್ದು, ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.