ಕರಾವಳಿ

ದರೋಡೆಗೆ ಸಂಬಂಧಿಸಿ ಬಂಧಿತರಾದ ಆರೋಪಿಗಳಿಂದ ಬಿಜೆಪಿ ಮುಖಂಡರ ಕೊಲೆಗೆ ಸಂಚು : ಒತ್ತಡಕ್ಕೆ ಮಣಿದು ಪ್ರಕರಣ ತಿರುಚಿದ ಪೊಲೀಸರು – ಆರೋಪ

Pinterest LinkedIn Tumblr

ಮಂಗಳೂರು, ಮಾರ್ಚ್‌ 30: ದುಷ್ಕರ್ಮಿಗಳ ತಂಡವೊಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ-ಮೂಡಬಿದಿರೆ ಕ್ಷೆತ್ರದ ಬಿಜೆಪಿ ಮುಖಂಡರೊಬ್ಬರ ಕೊಲೆಗೆ ಯತ್ನಿಸಿ ವಿಫಲಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ದರೊಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಆದರೆ ತೀವ್ರ ವಿಚಾರಣೆ ವೇಳೆ ಬಂಧಿತ ಆರೋಪಿಗಳು ಮುಲ್ಕಿ – ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿಜೆಪಿ ಮುಖಂಡ ಈಶ್ವರ್ ಕಟೀಲ್ ಅವರ ಕೊಲೆಗೆ ಸಂಚು ನಡೆಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ ಎನ್ನಲಾಗಿದೆ.

ಬಂಧಿತ ಆರೋಪಿಗಳನ್ನು ಪ್ರದೀಪ್ ಪೂಜಾರಿ, ದಿನೇಶ್ ಬೆಳ್ಚಡ ಮತ್ತು ಶಿವಪ್ರಸಾದ್ ಎಂದು ಗುರುತಿಸಲಾಗಿದ್ದು, ಬಂಧಿತರು ಈಶ್ವರ್ ಕಟೀಲ್ ಅವರ ಕೊಲೆಗೆ ಯತ್ನಿಸಿದ್ದರು. ಆದರೆ ಅದೃಷ್ಠವಶಾತ್ ಈಶ್ವರ್ ಕಟೀಲ್ ಆರೋಪಿಗಳ ಕೈ ಸಿಗದೆ ಪಾರಾಗಿದ್ದರು ಎನ್ನಲಾಗಿದೆ. ಬಂಧಿತ ಆರೋಪಿಗಳಿಂದ ಮಾರಕಾಸ್ತ್ರಗಳು ಸೇರಿದಂತೆ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಒತ್ತಡಕ್ಕೆ ಮಣಿದು ಪ್ರಕರಣ ತಿರುಚಿದ ಪೊಲೀಸರು : ಆರೋಪ

ದರೊಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದ್ದರೂ,,, ಬಂಧಿತ ಆರೋಪಿಗಳು ದರೊಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿಲ್ಲ.. ಬದಲಾಗಿ ಕೊಲೆಗೆ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಆದರೆ ಪೊಲೀಸರು ರಾಜಕೀಯ ಒತ್ತಡದಿಂದಾಗಿ ಈ ಪ್ರಕರಣವನ್ನು ತಿರುಚಿ ದರೋಡೆಗೆ ಸಂಚು ಪ್ರಕರಣ ಎಂದು ಬದಲಾಯಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಈ ಕೊಲೆ ಸಂಚಿನ ಮಾಹಿತಿ ಪಡೆದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಈ ನಡುವೆ ರಾಜಕೀಯ ಒತ್ತಡದಿಂದಾಗಿ ಪೊಲೀಸರು ಈ ಪ್ರಕರಣವನ್ನು ತಿರುಚಿ ದರೋಡೆಗೆ ಸಂಚು ಪ್ರಕರಣ ಎಂದು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಧಿತರು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್‌ ಯುವ ಮುಖಂಡ ಮಿಥುನ್ ರೈ ಅವರ ಬೆಂಬಲಿಗರೆಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರ ಮೇಲೆ ರಾಜಕೀಯ ಒತ್ತಡ ಹೇರಿ ಪ್ರಕರಣವನ್ನು ಬದಲಿಸಿ ದರೋಡೆ ಸಂಚು ಎಂದು ಫಿಕ್ಸ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಈ ನಡುವೆ ಪೊಲೀಸರು ಪ್ರಕರಣದ ಪ್ರಮುಖ ಸೂತ್ರಧಾರಿ ಎಂದು ಹೇಳಲಾಗುವ ಕಾಂಗ್ರೆಸ್ ಮುಖಂಡ ನವೀನ್ ಕುಮಾರ್ ಕಟೀಲ್ ಮತ್ತು ಆಕಾಶ್ ಗಾಣಿಗ ಅವರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಪೊಲೀಸರು ನವೀನ್ ಹಾಗು ಆಕಾಶ್ ಬಂಧನಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

Comments are closed.