ಉಡುಪಿ: ಪೊಲೀಸ್ ಧ್ವಜ ದಿನಾಚರಣೆ ಸಮಾರಂಭವು ಉಡುಪಿ ಜಿಲ್ಲೆ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಧ್ವಜ ದಿನಾಚರಣೆಯ ಗೌರವ ವಂದನೆಯನ್ನು ನಿವೃತ್ತ ಪೊಲೀಸ್ ಉಪನಿರೀಕ್ಷಕ ರಾಜಗೋಪಾಲ ಸ್ವೀಕರಿಸಿದರು.

ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ನಿವೃತ್ತ ಪೊಲೀಸರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ನಿವೃತ್ತ ಪೊಲೀಸರಿಗೆ ಸಹಾಯಧನವನ್ನು ವಿತರಿಸಲಾಯಿತು.
Comments are closed.