ಕರಾವಳಿ

ಕಾಂಗ್ರೆಸ್ ದೇಶದ ಜನರಿಗೆ ಅವಮಾನ ಮಾಡುತ್ತಿದೆ: ಶೋಭಾ ಕರಂದ್ಲಾಜೆ

Pinterest LinkedIn Tumblr

ಉಡುಪಿ: ಸಂಸದ್ ಅಧಿವೇಶವನ್ನು ನಿರಂತರವಾಗಿ ಭಂಗಗೊಳಿಸುತ್ತಿರುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸಿನ ಮಿತ್ರ ಪಕ್ಷಗಳ ಧೋರಣೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಉಪವಾಸ ಸತ್ಯಾಗ್ರಹವನ್ನು ನಡೆಸಿದರು. ಉಡುಪಿಯ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಬಿಜೆಪಿ ಕಾರ್ಯಕರ್ತರು ಸಂಸದೆ ಶೋಭಾ ನೇತೃತ್ವದಲ್ಲಿ ಪ್ರತಿಭಟನೆಯನ್ನ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಾಟನಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ , ಸಂಸದ್ ಕಲಾಪಕ್ಕೆ ನಿರಂತರವಾಗಿ ಕಾಂಗ್ರೆಸ್ ಭಂಗಗೊಳಿಸುತ್ತಾ ಬಂದಿದೆ. ದೇಶದ ಅಭಿವೃದ್ದಿಯ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಚಿಂತೆ ಇಲ್ಲ. ಈ ರೀತಿಯ ಬೆಳವಣಿಗೆ ದೇಶ ಅಭಿವೃದ್ದಿಗೆ ಮಾರಕವಾಗಿದ್ದು, ಕಾಂಗ್ರೆಸ್ ದೇಶದ ಜನರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದರು.

Comments are closed.