ಕರಾವಳಿ

ಬೈಂದೂರು ಬಿಜೆಪಿ ಅಭ್ಯರ್ಥಿಯಾಗಿ ಬಿ.ಎಂ ಸುಕುಮಾರ್ ಶೆಟ್ಟಿ

Pinterest LinkedIn Tumblr

ಕುಂದಾಪುರ: ವಿಧಾನಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು ಕುತೂಹಲ ಕೆರಳಿಸಿದ್ದ ಬೈಂದೂರು ಕ್ಷೇತ್ರಕ್ಕೆ ಬಿ.ಎಂ ಸುಕುಮಾರ್ ಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಪ್ತ ವಲಯದಲ್ಲಿ ಬಿ.ಎಂ.ಸುಕುಮಾರ ಶೆಟ್ಟಿ ಗುರುತಿಸಿಕೊಂಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಕಾಂಗ್ರೆಸ್‌ನ ಅಭ್ಯರ್ಥಿ ಗೋಪಾಲ ಪೂಜಾರಿ ಅವರ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದ ಸುಕುಮಾರ ಶೆಟ್ಟಿ ಬಳಿಕ ಒಂದಷ್ಟು ವರ್ಷ ಪಕ್ಷದ ಅಧ್ಯಕ್ಷ ಗಾದಿಯಲ್ಲಿದ್ದರು. ಅಧ್ಯಕ್ಷತನದ ಅವಧಿ ಮುಗಿದ ಬಳಿಕವೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಕಾರ್ಯಕರ್ತರ ಜೊತೆಗೆ ನಿಕಟವಾಗಿದ್ದರು.

ಈ ಹಿಂದೆ ಕೆ.ಜಯಪ್ರಕಾಶ್ ಹೆಗ್ಡೆಯವರಿಗೆ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗಲಿದೆ ಎಂಬ ಮಾಹಿತಿಯಿತ್ತು. ಅದಕ್ಕೆ ಪೂರಕವಾಗಿ ಕ್ಷೇತ್ರಾದ್ಯಂತ ತಿರುಗಾಡಿದ್ದರು. ಆದರೂ ಕೂಡ ಟಿಕೆಟ್ ಬಿ.ಎಂ ಸುಕುಮಾರ್ ಶೆಟ್ಟಿ ಪಾಲಾಗಿದೆ.

Comments are closed.