ಕರಾವಳಿ

ಮೇ.7: ಪ್ರಧಾನಿ ಮೋದಿ ಮಂಗಳೂರಿಗೆ

Pinterest LinkedIn Tumblr

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 7ರಂದು ನಗರಕ್ಕೆ ಆಗಮಿಸಲಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಪರ ಚುನಾವಣಾ ಪ್ರಚಾರದ ರ್‍ಯಾಲಿಗಳಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ 8 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಘೋಷಣೆ ಮಾಡಲಾಗಿದೆ.

ಮೂರು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಗೆ ಬಾಕಿ ಇದೆ. ಮೇ ೧೨ರಂದು ಚುನಾವಣೆ ನಡೆಯಲಿದ್ದು, ಅದಕ್ಕೆ ೫ ದಿನ ಮುಂಚಿತವಾಗಿ ಪ್ರಧಾನಿ ಮೋದಿ ಅವರು ಜಿಲ್ಲೆಗೆ ಆಗಮಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮತದಾನ ದಿನಾಂಕಕ್ಕೆ ಕೇವಲ 5 ದಿನ ಬಾಕಿ ಇರುವಾಗ ಕರಾವಳಿಗೆ ಬಂದು ಚುನಾವಣಾ ಪ್ರಚಾರದಲ್ಲಿ ಸ್ಟಾರ್ ಪ್ರಚಾರಕರಾಗಿ ಮೋದಿ ಅವರು ಪಾಲ್ಗೊಳ್ಳುವ ಹಿಂದೆ ರಾಜಕೀಯ ಲೆಕ್ಕಾಚಾರ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Comments are closed.