ಕರಾವಳಿ

ವಿಧಾನ ಸಭಾ ಚುನಾವಣೆ ಹಿನ್ನೆಲೆ : ಮಂಗಳೂರಿನಲ್ಲಿ ಬಿಜೆಪಿಯ ಚುನಾವಣಾ ಕಚೇರಿ ಉದ್ಘಾಟನೆ

Pinterest LinkedIn Tumblr

ಮಂಗಳೂರು ಏಪ್ರಿಲ್ 20: ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಚೇರಿಯ ಉದ್ಘಾಟನಾ ಸಮಾರಂಭ ಗುರುವಾರ ಮಂಗಳೂರಿನಲ್ಲಿ ನಡೆಯಿತು. ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಚುನಾವಣಾ ಕಾರ್ಯಲಯವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹಿಂದುತ್ವ, ಹಿಂದೂ ವಿಚಾರ ಧಾರೆ ಮತ್ತು ಸಂಘಟನಾತ್ಮಕ ಶಕ್ತಿಯ ಆಧಾರದ ಮೇಲೆ ಈ ಬಾರಿಯ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಂತೆ ನಾವು ಜಾತಿ ಹೆಸರಿನಲ್ಲಿ ಮತ ಕೇಳಲ್ಲ. ಅಭ್ಯರ್ಥಿ ಆಯ್ಕೆಯಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಉಳಿದವರಂತೆ ವಾಟ್ಸಾಪ್ , ಫೇಸ್ಬುಕ್ ನಲ್ಲಿರುವವರಿಗೆ ಮಾತ್ರ ಗೊಂದಲಗಳಿವೆ ಎಂದು ವ್ಯಂಗ್ಯವಾಡಿದರು. ಈ ಬಾರಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತನಾಡಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಧಿಕಾರಿಗಳಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ದ್ವೇಷದ ರಾಜಕಾರಣ, ಜಾತಿ- ಧರ್ಮದ ಹೆಸರಿನಲ್ಲಿ ಜನರನ್ನು ವಿಭಜನೆ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ,” ಎಂದು ಕಿಡಿಕಾರಿದರು.

ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಜನರ ನೆಮ್ಮದಿಯ ಬದುಕಿಗೆ ಬಿಜೆಪಿಯನ್ನು ಆಡಳಿತಕ್ಕೆ ತರುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.

ಕೇರಳ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರನ್, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಎಂಎಲ್‌‍ಸಿ ಮೋನಪ್ಪ ಭಂಡಾರಿ, ರಾಜ್ಯ ಸಂಚಾಲಕಿ ಸುಲೋಚನಾ ಭಟ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮಾತ್ ಹಾಗೂ ಮತ್ತಿತರ ಪಕ್ಷದ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments are closed.