ಕರಾವಳಿ

ಬೈಂದೂರು: ಜೆಡಿಎಸ್ ಪಕ್ಷದಿಂದ ಕಾರ್ಮಿಕ ಮುಖಂಡ ರವಿ ಶೆಟ್ಟಿ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಕುಂದಾಪುರ: ಕರ್ನಾಟಕ ಕಾರ್ಮಿಕರ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಹಲವಾರು ಕಾರ್ಮಿಕ ಉಪಯೋಗಿ ಕೆಲಸವನ್ನು ಮಾಡಿದಂತಹ ಕಾರ್ಮಿಕ ಮುಖಂಡ ರವಿ ಶೆಟ್ಟಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು .

ಬೆಳಗ್ಗೆ ತನ್ನ ಕುಟುಂಬಸ್ಥರೊಂದಿಗೆ ಹಾಗೂ ಬೆಂಬಲಿಗರ ಜೊತೆಗೂಡಿ ಹೊಲಾರ ಶ್ರೀ ಮಹಾಗಣಪತಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕೆ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ಬೈಂದೂರಿನ ಸೇನೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ . ನೂರಾರು ಬೆಂಬಲಿಗರೊಂದಿಗೆ ಪಾದಯಾತ್ರೆ ಮುಖಾಂತರ ಶ್ರೀ ಶಕ್ತಿ ಭವನ ಬೈಂದೂರು ಇಲ್ಲಿ ಚುನಾವಣಾಧಿಕಾರಿಯಾದ ಶ್ರೀನಿವಾಸ್ ಮತ್ತು ಸಹಾಯಕ ಚುನಾವಣಾಧಿಕಾರಿ ಪುರಂದರವರಿಗೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

 

ನಾಮಪತ್ರ ಸಲ್ಲಿಸಿ ಮಾತನಾಡಿದ ರವಿ ಶೆಟ್ಟಿಯವರು ಬದಲಾವಣೆ ಮತ್ತು ಅಭಿವೃದ್ಧಿಗೋಸ್ಕರ ಜನ ನನ್ನನ್ನು ಬೆಂಬಲಿಸಬೇಕು ಅವರ ಸೇವೆಗಾಗಿ ತನ್ನನ್ನು ತಾನು ಅರ್ಪಿಸಿಕೊಳ್ಳುವುದಾಗಿ ತಿಳಿಸಿದರು .

ಈ ಸಂದರ್ಭದಲ್ಲಿ ಜೆಡಿಎಸ್ಸಿನ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಕಾಪು, ನಿಕಟಪೂರ್ವ ಮಹಿಳಾಧ್ಯಕ್ಷೆ ಶಾಲಿನಿ ಶೆಟ್ಟಿ ಕೆಂಚನೂರು ಮತ್ತು ಬೈಂದೂರು ತಾಲೂಕು ಅಧ್ಯಕ್ಷ ಸಂದೇಶ್ ಭಟ್, ಹಿರಿಯರಾದ ಸಬ್ಲಾಡಿ ಮಂಜಯ್ಯ ಶೆಟ್ಟಿ ಉಪಸ್ಥಿತರಿದ್ದರು. ಪಾದಯಾತ್ರೆಯಲ್ಲಿ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಅಡಿಗ, ಮನ್ಸೂರ್ ಮರವಂತೆ ಮತ್ತು ಕನ್ನಡ ಚಳವಳಿ ಹೋರಾಟಗಾರರಾದ ಚಳವಳಿ ನಾಗೇಶ್, ನೂರಾರು ಜನ ಬೆಂಬಲಿಗರು ಭಾಗವಹಿಸಿದ್ದರು.

Comments are closed.