ಕರಾವಳಿ

ಮಂಗಳೂರು ದಕ್ಷಿಣದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು, ಎಪ್ರಿಲ್.22: ಬಾರಿಯ ಕರ್ನಾಟಕ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಅರ್ಎಸ್ಎಸ್ ಹಿರಿಯ ಕಾರ್ಯಕರ್ತ ಹಾಗೂ ಬಿಜೆಪಿಯ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಆರ್. ಶ್ರೀಕರ ಪ್ರಭು ಅವರ ಚುನಾವಣಾ ಪ್ರಚಾರ ಕಾರ್ಯಕ್ಕೆ ವಿನಿಯೋಗಿಸುವ ಧ್ವನಿವರ್ಧಕ ವ್ಯವಸ್ಥೆ ಇರುವ ಪ್ರಚಾರ ವಾಹನದ ಉದ್ಘಾಟನೆ ಇಂದು ಬಂಟ್ಸ್ ಹಾಸ್ಟೇಲ್ ಸಮೀಪದ ಶ್ರೀಕರ ಪ್ರಭು ಅವರ ಚುನಾವಣಾ ಕಾರ್ಯಾಲಯದಲ್ಲಿ ನಡೆಯಿತು.

ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಶ್ರೀಯುತ ಸುರೇಶ್ ಶೆಟ್ಟಿ ಹಾಗೂ ಮಾಜಿ ಸಂಘ ಪ್ರಚಾರಕ ಶ್ರೀಯುತ ರಾಮ್ ಮೋಹನ್ ಇವರು ಶ್ರೀಕರ ಪ್ರಭು ಅವರ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರು ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮನ್ನು ಬೆಂಬಲಿಸಬೇಕಾಗಿ ವಿನಂತಿಸಿಕೊಂಡರು.

Comments are closed.