ಕರಾವಳಿ

ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನ ಪುಷ್ಕರಣಿಗೆ ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ನೀರು ಪಾಲು; ಓರ್ವನ ಮೃತದೇಹ ಪತ್ತೆ

Pinterest LinkedIn Tumblr

ಕುಂದಾಪುರ: ಕೆರೆಗೆ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ.

 

ಮೂರು ಮಂದಿ ಒಟ್ಟಿಗೆ ಈಜಲು ತೆರಳಿದ್ದು, ಅವರಲ್ಲಿ ಕೀರ್ತನ್ (20), ಸಚಿನ್ (20) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇವರಿಬ್ಬರು ಕುಂದಾಪುರ ತಾಲೂಕಿನ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನ ಪುಷ್ಕರಣಿಗೆ ಈಜಲು ತೆರಳಿದ್ದು, ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತರು ಕೋಟೇಶ್ವರ ಪದವಿ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಸಚಿನ್ ಬಿ.ಎ, ಕೀರ್ತನ್ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಮೃತದೇಹಕ್ಕಾಗಿ ಅಗ್ನಿಶಾಮಕ ದಳ, ಸ್ಥಳೀಯರು, ಪೊಲೀಸರಿಂದ ವ್ಯಾಪಕ ಶೋಧ ಕಾರ್ಯ ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದೆ.

Comments are closed.