ಕರಾವಳಿ

ಚುನಾವಣಾ ಪ್ರಚಾರ ಹಿನ್ನೆಲೆ : ನಾಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂಟ್ವಾಳಕ್ಕೆ..

Pinterest LinkedIn Tumblr

ಮಂಗಳೂರು, ಎಪ್ರಿಲ್ 26: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣಾ ಪ್ರಚಾರಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಪ್ರಿಲ್ 27ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಲಿದ್ದಾರೆ.

ಎಪ್ರಿಲ್ 27ರಂದು ಬೆಳಗ್ಗೆ ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಬಿ.ಸಿ. ರೋಡ್ ಸಮೀಪದ ಜೋಡು ಮಾರ್ಗ ಉದ್ಯಾನವನದಲ್ಲಿ ನಡೆಯುವ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಹೇಳಿದ್ದಾರೆ.

ದ.ಕ.ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಶತಸಿದ್ಧ : ರೈ

ಚುನಾವಣಾ ಟಿಕೆಟ್ ಹಂಚಿಕೆಗೆ ಸಂಬಂಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷಕ್ಕೆ ಗೆಲುವು ಶತಸಿದ್ಧ. ಚುನಾವಣೆ ಎದುರಿಸಲು ಜಿಲ್ಲಾ ಕಾಂಗ್ರೆಸ್ ಸರ್ವ ಸನ್ನದ್ಧವಾಗಿದೆ ಎಂದು ರಮಾನಾಥ ರೈ ತಿಳಿಸಿದ್ದಾರೆ.

Comments are closed.