ಕರಾವಳಿ

ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಾ.ಜಿ.ಪರಮೇಶ್ವರ್ ವಿಶ್ವಾಸ

Pinterest LinkedIn Tumblr

ಮಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ. ಮೊಹಿಯುದ್ದೀನ್ ಬಾವಾ ಅವರ ಜತೆ ಪಕ್ಷದ ಚುನಾವಣಾ ಪ್ರಚಾರದ ಕುರಿತು ಚರ್ಚೆ ನಡೆಸಿದರಲ್ಲದೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಭಾರಿಯ ಚುನಾವಣೆಯ ಯಾವುದೇ ಜಾತಿ, ಧರ್ಮದ ಆಧಾರದಲ್ಲಿ ನಡೆಯುವುದಿಲ್ಲ. ಕೇವಲ ಅಭಿವೃದ್ಧಿಯ ಹಿನ್ನೆಲೆಯಲ್ಲಿ ನಡೆಯಲಿದೆ. ಕಳೆದ ಐದು ವರ್ಷದಲ್ಲಿ ಸುಮಾರು ನಾನಾ ಇಲಾಖೆಯ ಮೂಲಕ 750 ಕೋಟಿ ರೂ.ಗೂ. ಅಧಿಕ ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 303 ಕೋಟಿ ರೂ. ಮೊತ್ತದ ಕಾಮಗಾರಿ ಅನುಷ್ಠಾನಕ್ಕೆ ಸಿದ್ಧಗೊಂಡಿದೆ. ಇದುವೇ ಮೊಹಿಯುದ್ದೀನ್ ಬಾವಾ ಅವರಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಕೈಗೆತ್ತಿಕೊಂಡ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕೆಲಸವನ್ನು ಮಾಡಬೇಕಿದೆ. ಈ ಕೆಲಸವನ್ನು ಮುಂದಿನ ಒಂದು ತಿಂಗಳಿನಲ್ಲಿ ಸಮರ್ಥವಾಗಿ ಎಲ್ಲರಿಗೂ ತಿಳಿಸುವ ಕೆಲಸವನ್ನು ಕಾರ‍್ಯಕರ್ತರು ಮಾಡಬೇಕಿದೆ ಎಂದರು.

ಮಂಗಳೂರು ಉತ್ತರದಲ್ಲಿ ಶಾಸಕ ಬಿ.ಎ. ಮೊಹಿಯುದ್ದೀನ್ ಬಾವಾ ಅವರು ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ರಸ್ತೆ, ಮಾರುಕಟ್ಟೆ, ಇಂದಿರಾ ಕ್ಯಾಂಟೀನ್ ನಿರ್ಮಾಣ ಮತ್ತಿತರ ಒಳ್ಳೆಯ ಜನಪರ ಯೋಜನೆ ಕ್ಷೇತ್ರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ಐದು ವರ್ಷಗಳಿಗೆ ಬಾವಾ ಮತ್ತೆ ಆಯ್ಕೆಯಾಗುವುದು ಖಚಿತ ಎಂದರು. ಕಾಂಗ್ರೆಸ್ ಅಭ್ಯರ್ಥಿ ಮೊಹಿಯುದ್ದೀನ್ ಬಾವಾ, ಹ್ಯಾರಿಸ್ ಬೈಕಂಪಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.