ಕರಾವಳಿ

ಸಚಿವ ರಮಾನಾಥ ರೈ ಅವರ ಹಿರಿಯ ಸಹೋದರ ಬೆಳ್ಳಿಪ್ಪಾಡಿ ಸತೀಶ್ ರೈ ನಿಧನ

Pinterest LinkedIn Tumblr

ಮಂಗಳೂರು : ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಹಿರಿಯ ಸಹೋದರ, ಮೈಸೂರಿನ ಜನಪ್ರಿಯ ವೈದ್ಯ, ಬೆಳ್ಳಿಪ್ಪಾಡಿ ಸತೀಶ್ ರೈ ನಿಧನ ಹೊಂದಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆ ಉಸಿರೆಳೆದಿದ್ದಾರೆ.

ಯಕ್ಷಗಾನದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ರೈ, ಮೈಸೂರಿನಲ್ಲಿ ನಡೆಯುವ ಯಕ್ಷಗಾನ ಚಟುವಟಿಕೆಗಳಿಗೆ ಪೋಷಕರಾಗಿದ್ದರು. ಸರಳತೆ, ಸಜ್ಜನಿಕೆಗೆ ಹೆಸರಾದ ಸತೀಶ್ ರೈ ಬಡ ರೋಗಿಗಳಿಂದ ಶುಲ್ಕ ಪಡೆಯದೆ ಉಪಚರಿಸುತ್ತಿದ್ದರು.

ಬೆಳ್ಳಿಪ್ಪಾಡಿ ಸತೀಶ್ ರೈ ಅವರ ನಿಧನಕ್ಕೆ ನಗರದ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

Comments are closed.