ಕರಾವಳಿ

ಮಂಗಳೂರಿನಲ್ಲಿ ಕಾಂಗ್ರೆಸ್ ದಕ್ಷಿಣ ಅಭ್ಯರ್ಥಿ ಲೋಬೋ ಪರ ಬೃಹತ್ ಪಾದಯಾತ್ರೆ

Pinterest LinkedIn Tumblr

ಮಂಗಳೂರು, ಮೇ.11: ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ಜೆ. ಆರ್. ಲೋಬೊರವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಪಾದಯಾತ್ರೆಯು ಗುರುವಾರ ಸಂಜೆ ನಗರದಲ್ಲಿ ನಡೆಯಿತು.

ಮಂಗಳೂರು ಕೇಂದ್ರ ಮೈದಾನದಲ್ಲಿ ಆರಂಭಗೊಂಡ ಪಾದಯಾತ್ರೆಯು ಕೇಂದ್ರ ಮೈದಾನದಿಂದ ಹೊರಟು ಹಂಪನಕಟ್ಟೆ ಸಿಗ್ನಲ್ ವೃತ್ತ, ಪಿ.ವಿ.ಎಸ್. ವೃತ್ತ, ಎಂ.ಜಿ. ರಸ್ತೆ, ಲೇಡಿಹಿಲ್ ವೃತ್ತ ಮೂಲಕ ಉರ್ವ ಮಾರ್ಕೆಟ್ ಮೈದಾನದಲ್ಲಿ ಸಮಾಪನಗೊಂಡಿತು.

ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪಕ್ಷದ ಪ್ರಮುಖರಾದ ವಿಶ್ವಾಸ್ ದಾಸ್, ಶೇಖರ್ ಕೋಟ್ಯಾನ್ ಸೇರಿದಂತೆ ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಅಭಿಮಾನಿಗಳು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಸುರೇಶ್ ಬಲ್ಲಾಳ್ ನೇತ್ರತ್ವದಲ್ಲಿ ಬೃಹತ್ ಪಾದಯಾತ್ರೆ :

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆ. ಆರ್. ಲೋಬೊರವರನ್ನು ಬೆಂಬಲಿಸಿ ಕಾಂಗ್ರೆಸ್ ಹಿರಿಯ ಮುಖಂಡ, ಮೂಡಾ ಅಧ್ಯಕ್ಷ ಸುರೇಶ್ ಬಲ್ಲಾಳ್ ಅವರ ನೇತ್ರತ್ವದಲ್ಲಿ ಬುಧವಾರ ಮಂಗಳೂರಿನಲ್ಲಿ ಬೃಹತ್ ಪಾದಯಾತ್ರೆ ನಡೆಯಿತು.
ಪಕ್ಷದ ಅಪಾರ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಅಭಿಮಾನಿಗಳು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Comments are closed.