ಕರಾವಳಿ

ಮಂಗಳೂರಿನಲ್ಲಿ ಭಾರೀ ಮಳೆಗೆ ಧರೆಗುರುಳಿದ ಬೃಹತ್ ಮರ : ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಹಾನಿ, ನಾಲ್ಕು ಕಾರು ಜಖಂ

Pinterest LinkedIn Tumblr

ಮಂಗಳೂರು, ಮೇ 18: ಮಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸಂಪೂರ್ಣ ಹಾನಿಗೊಂಡಿದ್ದು, ಜೊತೆಗೆ ಪಕ್ಕದಲ್ಲೇ ನಿಲ್ಲಿಸಲಾಗಿದ್ದ ನಾಲ್ಕು ಕಾರುಗಳು ಜಖಂಗೊಂಡ ಘಟನೆ ನಗರದ ಅತ್ತಾವರ ಬಾಬುಗುಡ್ಡೆಯಲ್ಲಿ ಸಂಭವಿಸಿದೆ.

ಅತ್ತಾವರ ಬಾಬುಗುಡ್ಡೆಯಲ್ಲಿ ಬೃಹತ್ ಮಾವಿನ ಮರವೊಂದು ಕಳೆದ ರಾತ್ರಿ ಗುಡುಗು ಮಿಂಚು ಸಹಿತ ಸುರಿದ ಧಾರಾಕಾರ ಮಳೆಗೆ ಧರೆಗುರುಳಿದೆ. ಮರ ಟ್ರಾನ್‌ಫಾರ್ಮರ್ ಹಾಗೂ ಅಲ್ಲೇ ನಿಲ್ಲಿಸಲಾಗಿದ್ದ ಕಾರುಗಳ ಮೇಲೆ ಉರುಳಿಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊಂಡಿವೆ. ಟ್ರಾನ್ಸ್‌ಫಾರ್ಮರ್ ಹಾಗೂ ಮೂರು ವಿದ್ಯುತ್ ಕಂಬಗಳಿಗೆ ಹಾನಿಯಾಗಿವೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮರವನ್ನು ತೆರವುಗೊಳಿಸಿದರು. ಸ್ಥಳೀಯ ಕಾರ್ಪೊರೇಟರ್ ಶೈಲಜಾ ಹಾಗೂ ಸಾರ್ವಜನಿಕರು ತೆರವು ಕಾರ್ಯಾಚರಣೆಗೆ ಸಹಕರಿಸಿದರು. ಟ್ರಾನ್ಸ್‌ಫಾರ್ಮರ್‌ಗೆ ಹಾನಿಯಾಗಿರುವುದರಿಂದ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

Comments are closed.