ಕರಾವಳಿ

ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರಿಂದ ನಾಳೆ ಧರ್ಮಸ್ಥಳದಲ್ಲಿ ವಿಶೇಷ ಪೂಜೆ

Pinterest LinkedIn Tumblr

ಮಂಗಳೂರು,ಮೇ 21: ಕರ್ನಾಟಕ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮಂಗಳವಾರ ಬೆಳಿಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ ನಿಯೋಜಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಳೆ ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ನಾಳೆ ಬೆಳಿಗ್ಗೆ 8.30 ಕ್ಕೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ವಸಂತಮಹಲ್ ಹೆಲಿಪ್ಯಾಡ್ ಗೆ ಬರಲಿದ್ದು ಅಲ್ಲಿಂದ ನೇರವಾಗಿ ಧರ್ಮಸ್ಥಳ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜೊತೆ ಚರ್ಚಿಸಲಿದ್ದಾರೆ. ಧರ್ಮಸ್ಥಳದಿಂದ 11.45 ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿ ದೇವಾಲಯಕ್ಕೆ ಕುಮಾರಸ್ವಾಮಿ ತೆರಳಲಿದ್ದಾರೆ

Comments are closed.