ಕರಾವಳಿ

ಮನೆ ಬಾಗಿಲು ಮುರಿದು ಎರಡೂವರೆ ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Pinterest LinkedIn Tumblr

ಉಡುಪಿ: ಮನೆಯ ಬಾಗಿಲು ಮುರಿದು ಎರಡೂವರೆ ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಘಟನೆ ಮಣಿಪಾಪಾಲದಲ್ಲಿ ನಡೆದಿದೆ.

ಮಣಿಪಾಲ ಅನಂತನಗರದ ನಿವಾಸಿ ಭಾಸ್ಕರ್ ಶೆಟ್ಟಿ ಎನ್ನುವವರ ಮನೆಗೆ ನುಗ್ಗಿದ ಕಳ್ಳರು ಮನೆಯ ಎಡಬದಿಯ ಬಾಗಿಲನ್ನು ಯಾವುದೋ ಆಯುಧದಿಂದ ಬಲತ್ಕಾರವಾಗಿ ಮೀಟಿ ಮನೆಯೊಳಗೆ ಪ್ರವೇಶಿಸಿ ಗೊದ್ರೇಜ್‌ ಕಪಾಟುಗಳನ್ನು ತೆರೆದು ಅದರೊಳಗಿದ್ದ 2,50,000/- ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.