ಕರಾವಳಿ

ಮಂಗಳೂರಿನಲ್ಲಿ ಸರಣಿ ಅಪಘಾತ : ಒಂದು ಲಾರಿ ಹಾಗೂ ನಾಲ್ಕು ಕಾರುಗಳಿಗೆ ಹಾನಿ

Pinterest LinkedIn Tumblr

ಮಂಗಳೂರು,ಮೇ.25: ಮಂಗಳೂರಿನ ಹೊರವಲಯದ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಇಂದು ನಡೆದ ಸರಣಿ ಅಪಘಾತದಲ್ಲಿ ಒಂದು ಲಾರಿ ಹಾಗೂ ನಾಲ್ಕು ಕಾರುಗಳಿಗೆ ಹಾನಿಯಾಗಿದೆ.

ಮಂಗಳೂರಿನಿಂದ ಕೇರಳ ರಾಜ್ಯ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ನೇತ್ರಾವತಿ ಸೇತುವೆಯಲ್ಲಿ ಕೆಟ್ಟುನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಇದನ್ನು ಗಮನಿಸದೆ ಹಿಂಬದಿಯಿಂದ ಬಂದ ಕಾರೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದಿದ್ದು ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಮೂರು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ. ಮಂಗಳೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.