ನವದೆಹಲಿ: ಮಂಗಳೂರಿನಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಮಳೆ ಸಂತ್ರಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಲ್ಲಿನ ಜನರು ಸುರಕ್ಷಿತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಂತೆಯೇ ಮಳೆ ಪೀಡಿತ ಪ್ರದೇಶಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಗಲ್ಫ್ ರಾಷ್ಟ್ರಗಳಲ್ಲಿ ಅಬ್ಬರಿಸಿದ್ದ ಮೆಕುನು ಚಂಡಮಾರುತ ಪರಿಣಾಮ ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರಿಮಳೆಯಿಂದಾಗಿ ಮಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮಂಗಳೂರು ಮಾತ್ರವಲ್ಲದೇ ಉಡುಪಿ, ಕರಾವಳಿಯಲ್ಲೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕುಡ್ಲ ಪ್ರವಾಹದಲ್ಲಿ ಮಳುಗಿದೆ. ಪರಿಣಾಮ ಉಡುಪಿಯಲ್ಲಿ 2 ದಿನಗಳಗ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Comments are closed.