ಕರಾವಳಿ

ಚರ್ಚ್‌ಗೆ ದಾಳಿ : ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸಂದೇಶ ಹರಿಬಿಟ್ಟ ಇಬ್ಬರು ಆರೋಪಿಗಳ ಸೆರೆ

Pinterest LinkedIn Tumblr

ಮಂಗಳೂರು : ಮಂಗಳೂರಿನಲ್ಲಿ ಚರ್ಚ್ ದಾಳಿ ನಡೆದಿದೆ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸಂದೇಶ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದ, ಅರಳಿಕೊಪ್ಪ ಗ್ರಾಮದ ಗುಡ್ಡಿಕೆರೆ ನಿವಾಸಿಗಳಾದ ಸುನಿಲ್ ವೇಗಸ್ (34) ಮತ್ತು ಸಚಿತ್ ಪಿ.ಪಿ. (23) ಎಂದು ಗುರುತಿಸಲಾಗಿದೆ.

ಆರೋಪಿಗಳು ಚುನಾವಣಾ ಫಲಿತಾಂಶ ಘೋಷಣೆಯಾದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಚರ್ಚ್ ಮೇಲೆ ದಾಳಿಯಾಗಿದೆ ಎಂದು ಸಾಮಾಜಿಕ ತಾಣಗಳಲ್ಲಿ ಸುಳ್ಳುಸಂದೇಶಗಳನ್ನು ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದೆ.

Comments are closed.