ಕರಾವಳಿ

ಜನರ ನಿರೀಕ್ಷೆಯಷ್ಟು ಸಾಧನೆಯ ಕೆಲಸ ಕೇಂದ್ರ ಸರಕಾರದಿಂದ ಆಗಿಲ್ಲ: ಪೇಜಾವರ ಶ್ರೀ

Pinterest LinkedIn Tumblr

ಉಡುಪಿ: ಸಿಎಂ ಕುಮಾರಸ್ವಾಮಿ ಅನುಭವಿ ರಾಜಕಾರಣಿಯಾಗಿದ್ದು ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಅಂತ ಹಾರೈಸ್ತೇನೆ ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ಹೇಳಿದ್ದಾರೆ.

ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ಚದ ವಿಕೃತಿಯಾಗಿದೆ, ರಾಜಕಾರಣಿಗಳು ರೆಸಾರ್ಟ್, ಆಪರೇಷನ್ ನಲ್ಲಿ ತಲ್ಲೀನರಾಗಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ನೈತಿಕತೆ ಹೊಂದಿಲ್ಲ. ಗೊಂದಲ ನಿರ್ಮಾಣವಾದ್ರೆ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಬೇಡ. ಸರ್ವ ಪಕ್ಷ ಸರ್ಕಾರ ಜಾರಿಗೆ ಬರುವಂತಹ ಪ್ರಯೋಗ ರಾಜ್ಯದಲ್ಲಿ ನಡೆಯಬೇಕು, ಇಂತಹ ಆದರ್ಶಮಂತ್ರಿ ಮಂಡಲ ರಚನೆಯಾಗಲಿ ಎಂದರು.

ವಿಪಕ್ಷ ಮುಕ್ತ ಸರ್ಕಾರ ಸರಿಯಲ್ಲ, ವಿಪಕ್ಷ ಇರಬೇಕು ಎಂಬೂದು ನನ್ನ ವಾದವಾಗಿದೆ. ಮೋದಿ ಸರ್ಕಾರದಿಂದ ಸಾಕಷ್ಟು ಕೆಲಸ ಆಗಿದೆ. ಕೇಂದ್ರ ಸರ್ಕಾರದ ಬಗ್ಗೆ ನಿರೀಕ್ಷೆ ಬಹಳ ಇತ್ತು ಆದರೇ ನಿರೀಕ್ಷೆಯಷ್ಟು ಸಾಧನೆಗಳು ಆಗಲಿಲ್ಲ ಎಂಬ ಬೇಸರವಿದೆ. ರಾಮ ಮಂದಿರಕ್ಕಿಂತ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ಗಂಗಾ ಶುದ್ಧೀಕರಣ ಸಂಪೂರ್ಣವಾಗಿ ಆಗಿಲ್ಲ ಎಂದರು.

Comments are closed.