ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ; ಆತ್ಮಹತ್ಯೆ ಶಂಕೆ

Pinterest LinkedIn Tumblr

ಕುಂದಾಪುರ: ಅಪರಿಚಿತ ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಪಡುವರಿ ಗ್ರಾಮದ ಒತ್ತಿನಣೆಯಲ್ಲಿ ನಡೆದಿದೆ.

ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಶವವು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅರಣ್ಯ ಇಲಾಖೆಗೆ ಸಂಬಂದಿಸಿದ ಜಾಗದಲ್ಲಿರುವ ಅಕೇಶಿಯಾ ಮರಕ್ಕೆ‌ ಲುಂಗಿ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಯಾರೆಂಬುದು ಇನ್ನೂ ನಿಗೂಢವಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.