ಕರಾವಳಿ

ಪರಿಸರವನ್ನು ಉಳಿಸುವಲ್ಲಿ ಪತ್ರಿಕಾ ರಂಗದ ಕಾರ್ಯ ಶ್ಲಾಘನೀಯ : ಶಾಸಕ ವೇದವ್ಯಾಸ ಕಾಮತ್

Pinterest LinkedIn Tumblr

ಮಂಗಳೂರು : ಅವಕಾಶ ಇದ್ದ ಕಡೆ ಗಿಡಗಳನ್ನು ನೆಡುವುದರಿಂದ ಪರಿಸರದ ಉಳಿವಿಗೆ ಸೇವೆ ಸಲ್ಲಿಸಬಹುದು ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದರು.

ಅವರು ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಪ್ರಜಾವಾಣಿ-ಡೆಕ್ಕನ್ ಹೆರಾಲ್ಡ್ ಪತ್ರಿಕೆ ಜಂಟಿಯಾಗಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡಗಳನ್ನು ನೆಟ್ಟು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಈಗಾಗಲೇ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಾಧ್ಯಮ ರಂಗದ ಹೆಸರಾಂತ ಪತ್ರಿಕೆಗಳಾದ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಶ್ಲಾಘನೀಯ. ಮಂಗಳೂರಿನ ಜನರು ಮರಗಿಡಗಳನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಪರಿಸರವನ್ನು ಸುರಕ್ಷಿತವಾಗಿ ಹಸ್ತಾಂತರಿಸುವ ಕೆಲಸ ಮಾಡಬೇಕಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಮೇಯರ್ ಭಾಸ್ಕರ್ ಮೊಯಿಲಿ, ಪಾಲಿಕೆಯ ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಪಾಲಿಕೆ ಸದಸ್ಯೆ ರೂಪಾ ಡಿ ಬಂಗೇರ, ಫಾರೆಸ್ಟ್ ರೇಂಜರ್ ಶ್ರೀಧರ್, ಪ್ರೆಸ್ ಕ್ಲಬ್ ಅಧ್ಯಕ್ಷ ರೋನಿ ಫೆರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.

Comments are closed.