ಬೆಂಗಳೂರು, ಜೂನ್.8: ಪೊಲೀಸರ ಬಂಧನದ ವೇಳೆ ಆರೋಪಿ ಪರಾರಿಯಾಗಲು ಸಹಕರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಕನ್ನಡ ನಟ ದುನಿಯಾ ವಿಜಯ್‌ರನ್ನು ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಾಸ್ತಿಗುಡಿ ಚಿತ್ರೀಕರಣದ ವೇಳೆ ಸಹನಟರಿಬ್ಬರ ಸಾವಿನ ಪ್ರಕರಣದ ಆರೋಪಿ ಚಿತ್ರದ ನಿರ್ಮಾಪ ಸುಂದರ್ ಪಿ ಗೌಡ ಬಂಧನಕ್ಕೆ ಅಡ್ಡಿಪಡಿಸಿದ ಹಾಗೂ ಪರಾರಿಯಾಗಲು ಸಹಕರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ನಟ ದುನಿಯಾ ವಿಜಿ ನಾಪತ್ತೆಯಾಗಿದ್ದರು.
ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ಇಬ್ಬರು ಸಹ ನಟರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಿರ್ಮಾಪಕ ಸುಂದರ್ ಗೌಡ ವಿರುದ್ಧ ನಿರ್ಲಕ್ಷತನದ ಕೇಸ್ ದಾಖಲಾಗಿತ್ತು. ಇತ್ತೀಚೆಗೆ ರಾಮನಗರ ಪೊಲೀಸರು ಸುಂದರ್‌ರನ್ನು ಬಂಧಿಸಲು ಅವರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ದುನಿಯಾ ವಿಜಯ್ ಅವರು ಸುಂದರ್ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ನೆರವಾಗಿದ್ದರು ಎನ್ನಲಾಗಿದೆ. ನಟ ಜಯ್‌ರನ್ನು ಬಂಧಿಸುವಂತೆ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಈ ಘಟನೆಯ ಬಳಿಕ ವಿಜಯ್ ತಲೆಮರೆಸಿಕೊಂಡಿದ್ದರು.
ದೂರು ದಾಖಲಾದ ಹಿನ್ನೆಲೆಯಲ್ಲಿ ವಿಜಯ್ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಕಾರ್ಯಾಚರಣೆ ನಡೆಸಿರುವ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಮೊಬೈಲ್ ಟವರ್ ಲೊಕೇಶನ್ ಮೂಲಕ ನಟ ವಿಜಿಯನ್ನು ಪತ್ತೆಹಚ್ಚಿ ಬಂಧಿಸಿರುವುದಾಗಿ ಹೇಳಲಾಗಿದ್ದು, ನಟ ವಿಜಯನನ್ನು ಬೆಂಗಳೂರಿಗೆ ಕರೆತರುತ್ತಿರುವುದಾಗಿ ತಿಳಿದು ಬಂದಿದೆ.
Comments are closed.