ಕರಾವಳಿ

ಜೆಡಿಎಸ್ ಅಭ್ಯರ್ಥಿ ಭೋಜೇಗೌಡ ಗೆಲುವು: ಉಡುಪಿಯಲ್ಲಿ ಸಂಭ್ರಮ

Pinterest LinkedIn Tumblr

ಉಡುಪಿ: ವಿಧಾನಪರಿಷತ್ ಚುನವಣೆಯ ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬೋಜೆಗೌಡ ಭರ್ಜರಿ ಗೆಲುವಿಗೆ ಉಡುಪಿ ಜಿಲ್ಲಾ ಜೆಡಿಎಸ್ ಸಂಭ್ರಮಾಚರಣೆ ನಡೆಸುವ ಮೂಲಕ ಹರ್ಷ ವ್ಯಕ್ತಪಡಿಸಿದೆ.

ಉಡುಪಿಯ ಚಿತ್ತರಂಜನ್ ಸರ್ಕಲ್ ಬಳಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿಕೊಂಡರು. ಕಳೆದ ಹಲವು ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನುಜಯಗಳಿಸುತ್ತಿದ್ದ ಬಿಜೆಪಿ ಈ ಬಾರೀ ಸೋಲುಕಂಡಿದೆ. ಶಿಕ್ಷಕರ ಸಮಸ್ಯೆಗಳಿಗೆ ಬಿಜೆಪಿ ಸಕಾಲದಲ್ಲಿ ಸ್ಪಂದಿಸದ ಕಾರಣ ಬಿಜೆಪಿ ಸೋಲು ಕಂಡಿದೆ.

ಇದು ಜೆಡಿಎಸ್ ಪರ್ವಕಾಲ ಹಾಗೂ ಆರಂಭ ಕಾಲ. ಇನ್ನೂ ಮುಂದಿನ ದಿನಗಳಲ್ಲಿ ಲೋಕ ಸಭೆ ,ನಗರಸಭೆ ,ಪುರಸಭೆ ಚುನಾವಣೆಗಳಲ್ಲಿ ಬಿಜೆಪಿ ಸೋಲು ಕಾಣಲಿದೆ ಎಂದ್ರು. ಎಸ್ಸಿ ಎಸ್ಟಿ ಘಟಕದ ಜಿಲ್ಲಾದ್ಯಕ್ಷ ಸಚಿನ್ ಕೆ, ಉಡುಪಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಅದ್ಯಕ್ಷ ಅಬ್ದುಲ್ ಖಾದರ್, ಜಿಲ್ಲಾ ಪ್ರದಾನಕರ್ಯದರ್ಶಿ ಜಯರಾಮ್ ಆಚಾರ್ಯ, ಸುಧಾಕರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Comments are closed.