ಕರಾವಳಿ

ಶ್ರೀ ಕಾಳಿಕಾಂಬಾ ಕ್ಷೇತ್ರದಲ್ಲಿ ಶಾಸಕ ವೇದವ್ಯಾಸ ಕಾಮತ್‌ರಿಗೆ ಗೌರವ ಸಮ್ಮಾನ

Pinterest LinkedIn Tumblr

ಮಂಗಳೂರು : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕ ಡಿ. ವೇದವ್ಯಾಸ ಕಾಮತರವರು ಮಂಗಳೂರಿನ ರಥಬೀದಿಯ ವಿಶ್ವಬ್ರಾಹ್ಮಣರ ಪ್ರಧಾನ ಆರಾಧ್ಯ ಕೇಂದ್ರ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ಶಾಸಕರನ್ನು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.

ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಕೆ ಕೇಶವ ಆಚಾರ್ಯ ಮೊಕ್ತೇಸರರಾದ ಎಂ ಸುಂದರ ಆಚಾರ್ಯ, ಬೆಳುವಾಯಿ ಎ ಲೋಕೇಶ್ ಆಚಾರ್ಯ ಬಿಜೈ , ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಧನಂಜಯ ಪಾಲ್ಕೆ, ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು, ಜೀರ್ಣೋದ್ದಾರ ಸಮಿತಿ ಸದಸ್ಯರು, ಶ್ರೀ ಕಾಳಿಕಾಂಬಾ ಸೇವಾ ಸಮಿತಿ, ವಿಶ್ವಕರ್ಮ ಯುವ ವೇದಿಕೆ, ವಿಶ್ವಕರ್ಮ ಯುವ ಮಿಲನ ಸದಸ್ಯರು, ಬಿ ಜೆ ಪಿ ಯ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಿ ಮೋಹನ್ ಆಚಾರ್ಯ, ಪ್ರಮುಖರಾದ ಸಂಜಯ ಪ್ರಭು ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.

Comments are closed.