ಕರಾವಳಿ

ಜುಲೈ.6-7 :ಮೂಡಬಿದಿರೆಯಲ್ಲಿ “ಆಳ್ವಾಸ್ ಪ್ರಗತಿ- ಬೃಹತ್ ಉದ್ಯೋಗ ಮೇಳ”

Pinterest LinkedIn Tumblr

ಮಂಗಳೂರು : ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದಶಕದ ಸಂಭ್ರಮದೊಂದಿಗೆ “ಆಳ್ವಾಸ್ ಪ್ರಗತಿ- ಬೃಹತ್ ಉದ್ಯೋಗ ಮೇಳ”ಕ್ಕೆ ವ್ಯಾಪಕ ಸಿದ್ದತೆ ಮಾಡಲಾಗಿದ್ದು, ಇದೇ ಜುಲೈ06 ಕ್ಕೆ ಮೊದಲ ಸುತ್ತಿನ ಹಾಗೂ ಜುಲೈ 07 ಕ್ಕೇ ಕೊನೆಯ ಸುತ್ತಿನ ಆಯ್ಕೆ ಪ್ರಕ್ರಿಯೆಗಳು ಮೂಡಬಿದಿರೆಯ ವಿದ್ಯಾಗಿರಿಯ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾಹಿತಿ ನೀಡಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕಂತಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕಳೆದ 09 ವರ್ಷಗಳಿಂದ “ಆಳ್ವಾಸ್ ಪ್ರಗತಿ” ಯನ್ನು ಯಶಸ್ವಿಯಾಗಿ ನಡೆಸುತ್ತ ಬಂದಿದ್ದು, ಕೇವಲ ನಗರದಲ್ಲದೆ, ಗ್ರಾಮೀಣ ಸ್ಥರದ ಉದ್ಯೋಗಾಸಕ್ತರನ್ನೂ ತಲುಪಿ ಸೈ ಎನಿಸಿಕೊಂಡಿದೆ ಎಂದು ಹೇಳಿದರು.

ಆಳ್ವಾಸ್ ಪ್ರಗತಿ-2018ರ ಹತ್ತರ ಆವೃತ್ತಿಯಲ್ಲಿ ಐಟಿ, ಐಟಿಎಸ್, ಮ್ಯಾನುಪ್ಯಾಕ್ಚರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೂಬೈಲ್, ಬ್ಯಾಕಿಂಗ್ ಮತ್ತು ಹಣಕಾಸು, ಹಾಸ್ಪಿಟ್ಯಾಲಿಟಿ, ಶಿಕ್ಷಣ ಮತ್ತು ಎನ್ ಜಿಓ ಗಳನ್ನು ಪ್ರತಿನಿಧಿಸುವ ಉನ್ನತ ನೇಮಕಾತಿ ಕಂಪೆನಿಗಳು ಪಾಲ್ಗೊಳ್ಳುತ್ತಿವೆ. ಈ ಕಂಪೆನಿಗಳು ಪದವಿ ಮತ್ತು ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಆಟ್ರ್ಸ, ಕಾಮಾರ್ಸ ಹಾಗೂ ಮ್ಯಾನೇಜ್ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಮತ್ತು ಎಸ್‍ಎಸ್‍ಎಲ್‍ಎಸ್ಸಿಯಲ್ಲಿ ಮತ್ತು ಇತರ ವಿದ್ಯಾರ್ಹತೆಗಳುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ನುರಿತ ತರಬೇತಿ ಸಂಸ್ಥೆಗಳು ಇಲ್ಲಿ ಬಾಗವಹಿಸಲಿವೆ ಎಂದು ಅವರು ಹೇಳಿದರು.

ದೇಶದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಭಾರತದ್ಯಾಂತ ಉದ್ಯೋಗಾವಕಾಶ ಕಲ್ಪಿಸುವುದು ಮೂಲೋದ್ದೇಶ ವಾಗಿದ್ದು, ಆಳ್ವಾಸ್ ಪ್ರಗತಿಯಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ,ವೈದ್ಯಕೀಯ, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ವಾಣಿಜ್ಯ ಮತ್ತು ನಿರ್ವಹಣೆ, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ ಮತ್ತು ಡಿಪ್ಲೋಮ ಹಾಗೂ ಸ್ನಾತಕೋತ್ತರ ಪದವೀಧರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ವಿವೇಕ್ ಆಳ್ವ ಅವರು ವಿವರಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಗತಿ ಮೀಡಿಯಾ ಸಂಯೋಜಕಿ,ಡಾ. ಮೌಲ್ಯ ಜೀವನ್‍ರಾಂ, ಸಹಾಯಕ ಟಿಪಿಒ ಸುಶಾಂತ್ ಅನಿಲ್ ಲೋಬೋ, ಆಳ್ವಾಸ್ ಪ್ರಗತಿ ಸಂಯೋಜಕರಾದ ಮುದ್ದುಕೃಷ್ಣ ಸಿ ಶೆಟ್ಟಿ, ದೀಪಕ್ ರಾಜ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments are closed.