ಕರಾವಳಿ

ನಾಳೆ ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Pinterest LinkedIn Tumblr

ಮ0ಗಳೂರು ಜೂನ್ 20 : ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಜೂನ್ 21 ರಂದು ಮಂಗಳಾ ಒಳಾಂಗಣ ಕ್ರೀಡಾಂಗಣ, ಲೇಡಿಹಿಲ್, ಮಂಗಳೂರು ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು.

ಅಂದು ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಉದ್ಘಾಟಿಸುವರು. ಮುಖ್ಯ ಕಾರ್ಯಕ್ರಮದಲ್ಲಿ ಸುಮಾರು 1000 ಜನರು ಭಾಗವಹಿಸುವ ನಿರೀಕ್ಷೆಯಿದ್ದು , ಈಗಾಗಲೇ ವಿವಿಧ ಸಂಸ್ಥೆಗಳು ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜುಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿದೆಡೆ 5000ಕ್ಕಿಂತಲೂ ಹೆಚ್ಚು ಸಾರ್ವಜನಿಕರಿಗೆ ಯೋಗ ತರಬೇತಿಯನ್ನು ನೀಡಲಾಗಿದೆ.

ಸ್ವಚ್ಛ ಮನಸ್ಸು ಹಾಗೂ ಸ್ವಸ್ಥ ಶರೀರಕ್ಕಾಗಿ ವಿಶ್ವದಾದ್ಯಂತ ಭಾರತೀಯ ಜೀವನ ಪದ್ಧತಿಯಾದ ಯೋಗ ಜನಪ್ರಿಯವಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಂದು ಬೆಳಿಗ್ಗೆ 8 ಗಂಟೆಗೆ ಹಾಜರಾಗಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಜಿಲ್ಲಾ ಆಯುಷ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Comments are closed.