ಕರಾವಳಿ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯೋಗ ದಿನಾಚರಣೆ

Pinterest LinkedIn Tumblr

ಮಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಗುರುವಾರ ಕೆಂಜಾರು ವಿಮಾನ ನಿಲ್ದಾಣದ ಆವರಣದಲ್ಲಿ ಯೋಗ ದಿನಾಚರಣೆ ನಡೆಯಿತು.

ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿ.ವಿ,ರಾವ್ ಅವರ ನೇತ್ರತ್ವದಲ್ಲಿ ಈ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯೋಗದಿಂದ ಉತ್ತಮ ಆರೋಗ್ಯಕ್ಕೆ ಯಾವರೀತಿಯ ಪ್ರಯೋಜಗಳಾಗುತ್ತದೆ ಹಾಗೂ ಯೋಗದ ಮಹತ್ವವನ್ನು ವಿವರಿಸಲಾಯಿತು.

ಯೋಗ ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉಪನಿರ್ದೇಶಕ ಪಿ.ವಿ ಪ್ರಸಾದ್, ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳಾದ ಪಿ.ವಿ ಪ್ರಸಾದ್ ಅಮಿತ್ ಕುಮಾರ್, ಉಪ ಕಮಾಂಡೆಂಟ್ ಸಿಐಎಸ್ಎಫ್ ಅಧ್ಯಕ್ಷ ಕಲ್ಯಾಣ್ಮಯಿ (ಎಂಐಎ), ಜೆಟ್ ಏರ್ವೇಸ್ ಮತ್ತು ಏರ್ ಇಂಡಿಯಾದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು..

Comments are closed.