ಕರಾವಳಿ

ಯುವಾ ಬ್ರಿಗೇಡ್ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ರಕ್ತದಾನ ಶಿಬಿರ

Pinterest LinkedIn Tumblr

ಮಂಗಳೂರು : ಯುವಾ ಬ್ರಿಗೇಡ್ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದ ವಿಟಿ ರಸ್ತೆಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಯುವ ಬ್ರಿಗೇಡ್ ದೇಶ ಕಟ್ಟುವ ಕೆಲಸದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಾ ಇದೆ. ಹಾಗೆ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಮಾಜಮುಖಿಯಾಗಿ ನೊಂದವರಿಗೆ, ಅಸಹಾಯಕರಿಗೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಾ ಬರುತ್ತಿದೆ. ರಕ್ತದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷನ ನೆಲೆಯಲ್ಲಿ ಮಾತ್ರವಲ್ಲ ಶಾಸಕನಾಗಿಯೂ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ತೃಪ್ತಿ ತರುತ್ತದೆ ಎಂದು ವೇದವ್ಯಾಸ ಕಾಮತ್ ಹೇಳಿದರು.

ಶಿಬಿರದ ಸಂಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ಹನುಮಂತ ಕಾಮತ್, ಸಂತೋಷ್ ಭಂಡಾರಿ, ಪಾಂಡುರಂಗ ನಾಯಕ್, ಸತೀಶ್, ತಿಲಕ್ ಶಿಶಿಲ, ಕೆಎಂಸಿ ಬ್ಲೆಡ್ ಬ್ಯಾಂಕ್ ನ ಮುಖ್ಯಸ್ಥ ಭವಾನಿ ಶಂಕರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments are closed.