ಕರಾವಳಿ

ತನ್ನ ಕನಸಿಗೆ ಯಾವ ಸರ್ಕಾರವೂ ಸ್ಪಂದಿಸಿಲ್ಲ : ಸುದ್ಧಿಗಾರರಲ್ಲಿ ಅಳಲು ತೋಡಿಕೊಂಡ ಶತಾಯುಷಿ ಸಾಲುಮರದ ತಿಮ್ಮಕ್ಕ

Pinterest LinkedIn Tumblr

ಮಂಗಳೂರು : ನಾನು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸರ್ಕಾರ ನನಗೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಸ್ವಂತ ಮನೆ ಬೇಕು ಎನ್ನುವ ತನ್ನ ಕನಸಿಗೆ ಸರ್ಕಾರ ಸ್ಪಂದಿಸಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ತನ್ನ ಕನಸು ಸಾಕಾರಗೊಳಿಸಲಿ ಎಂದು ಶತಾಯುಷಿ ಸಾಲುಮರದ ತಿಮ್ಮಕ್ಕ ಅಳಲು ತೋಡಿಕೊಂಡಿದ್ದಾರೆ. ಮಂಗಳವಾರ ಮಂಗಳೂರಿನ ಕಾಲೇಜೊಂದರಲ್ಲಿ ನಡೆದ ವೃಕ್ಷಾಂಜಲಿ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ಉಮೇಶ್ ಅವರು ಮಾತನಾಡಿ,, ಹಿಂದೆ ಯಡಿಯೂರಪ್ಪ ಸರ್ಕಾರದ ಸಂದರ್ಭದಲ್ಲಿ ಹುಲಿಕಲ್‌ನಲ್ಲಿ ಹೆರಿಗೆ ಆಸ್ಪತ್ರೆಯನ್ನು ನಿರ್ಮಾಣ ಮಾಡುವುದು ಮತ್ತು ಸ್ವಂತ ನಿವೇಶನ ನೀಡಬೇಕೆಂಬ ಮನವಿ ಪುರಸ್ಕರಿಸಿ ಸರ್ಕಾರ ಮನೆ ಮಂಜೂರು ಮಾಡಿತ್ತು. ಆದರೂ ಅದು ತುಂಬಾ ದೂರದಲ್ಲಿದೆ ಎಂದು ತಿರಸ್ಕರಿಸಲಾಯಿತು.

ಆಸ್ಪತ್ರೆ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರಣಗಳನ್ನು ನೀಡಿ ಅದನ್ನು ಕೈಬಿಡಲಾಗಿದೆ. ತಿಮ್ಮಕ್ಕನವರ ಹೆಸರಿನಲ್ಲಿ ಸರ್ಕಾರ ಗ್ರೀನ್ ಪಾರ್ಕ್ ನಿರ್ಮಾಣ ಮಾಡಿದ್ದರೂ ಅದರ ಮಾಹಿತಿಯನ್ನು ಅವರಿಗೆ ನೀಡಿಲ್ಲ. ತಿಮ್ಮಕ್ಕನವರಿಂದ ಉದ್ಘಾಟನೆ ಕೂಡ ಮಾಡಿಸಿಲ್ಲ ಎಂದು ಅಳಲು ತೋಡಿಕೊಂಡರು.

Comments are closed.