
ಮಂಗಳೂರು : ಕಾಂಗ್ರೆಸ್ ಸರ್ಕಾರದ ತಾರತಮ್ಯ ನೀತಿ ಮೈತ್ರಿ ಸರ್ಕಾರದ ಬಜೆಟ್‌ನಲ್ಲಿಯೂ ಮುಂದುವರಿದಿದೆ. ಕರಾವಳಿ ಭಾಗವನ್ನು ಬಜೆಟ್‌ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಕೇವಲ ಎರಡು ಜಿಲ್ಲೆಗೆ ಮಾತ್ರ ಸೀಮಿತವಾದ ಬಜೆಟ್ ಮಂಡಿಸುವ ಮೂಲಕ ಕುಮಾರಸ್ವಾಮಿ ಅವರು ರಾಜ್ಯದ ಜನತೆಗೆ ದ್ರೋಹ ಎಸಗಿದ್ದಾರೆ. ರಾಜ್ಯದ ಹಿತದೃಷ್ಟಿ ಇಲ್ಲದ ಈ ಬಜೆಟ್ ಬಗ್ಗೆ ಜನತೆಗೆ ಯಾವುದೇ ಭರವಸೆ ಇಲ್ಲ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲು ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗೆ ಕಳೆದ ೪ ಬಜೆಟ್‌ನಲ್ಲಿ ಪ್ರಕಟಿಸಿದ ಯೋಜನೆಗಳು ಕೇವಲ ಘೋಷಣೆಗೆ ಸೀಮಿತವಾಗಿದೆ. ಇದೀಗ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಯಾವುದೇ ಯೋಜನೆ ಪ್ರಕಟಿಸದೆ ಅನ್ಯಾಯ ಎಸಗಿದೆ. ಮೀನುಗಾರರು ಮತ್ತು ಅಡಕೆ ಬೆಳೆಗಾರರನ್ನು ರಾಜ್ಯ ಸರ್ಕಾರ ಸಂಪೂರ್ಣ ಮರೆತಿದೆ. ದಕ್ಷಿಣ ಕನ್ನಡವನ್ನು ಸಂಪೂರ್ಣ ಕಡೆಗಣಿಸಿರುವ ಕಾರಣ ಇದನ್ನು ಬಜೆಟ್ ಅಂತ ಪರಿಗಣಿಸಲು ಸಾಧ್ಯವಿಲ್ಲ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.