ಕರಾವಳಿ

ಶಿರಾಡಿ ಘಾಟಿ ರಸ್ತೆ : ಜುಲೈ 16ರೊಳಗೆ ಸಂಚಾರಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು : ಶಿರಾಡಿ ಘಾಟಿ ರಸ್ತೆಯನ್ನು ಜುಲೈ 16 ರೊಳಗೆ ಸಂಚಾರಕ್ಕೆ ತೆರೆಯಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಈ ಸಂಬಂಧ ಸಚಿವರು, ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನು ಜುಲೈ16 ರೊಳಗೆ ಉದ್ಘಾಟಿಸುವ ಕುರಿತು ಈಗಾಗಲೇ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ದಿನಾಂಕ ಕೇಳಲಾಗಿದೆ. ಕೇಂದ್ರದ ಮಾಜಿ ರಸ್ತೆ ಸಾರಿಗೆ ಸಚಿವ ಆಸ್ಕರ್ ಫೆರ್ನಾಂಡಿಸ್, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮಳೆಯಿಂದ ಹಾನಿಗೊಂಡಿರುವ ರಸ್ತೆಗಳ ದುರಸ್ತಿ ಹಾಗೂ ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಶೀಘ್ರದಲ್ಲೇ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಧ್ಯಕ್ಷತೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಶಾಸಕರ ಸಭೆ ನಡೆಯಲಿದೆ ಎಂದು ಸಚಿವರಿ ಈ ವೇಳೆ ತಿಳಿಸಿದರು.

Comments are closed.